ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಜಿ ಅಹ್ವಾನ

ತುಮಕೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗಾಗಿ ಆಸಕ್ತ ಮಾಧ್ಯಮ ಸಂಸ್ಥೆ-ಇತರೆ ಸಂಘ ಸಂಸ್ಥೆ- ವ್ಯಕ್ತಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಹಿರಿಯ ಪರ್ತಕರ್ತ ಟಿ.ಎಸ್. ರಾಮಚಂದ್ರರಾವ್ ಅವರ ನೆನಪಿಗಾಗಿ ಟೀಯೆಸ್ಸಾರ್ ಹಾಗೂ ಪತ್ರಿಕಾ ರಂಗದ ಭೀಷ್ಮರೆಂದೇ ಹೆಸರಾದ ಮೊಹರೆ ಹಣಮಂತರಾಯ ಅವರ ನೆನಪಿಗಾಗಿ ಮೊಹರೆ ಹಣಮಂತರಾಯ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಈಗಾಗಲೇ ಪ್ರಶಸ್ತಿ ಆಯ್ಕೆಗಾಗಿ ಆಯ್ಕೆ ಸಮಿತಿ ರಚನೆಯಾಗಿದೆ. ಸಮಿತಿಯು ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಪಿ.ಎನ್.ದೇಸಾಯಿ, ಹಿರಿಯ ಪತ್ರಕರ್ತ ಡಾ.ಈಶ್ವರ ದೈತೋಟ, ಶಾಂತಲಾ ಧರ್ಮರಾಜ್, ಎಂ.ಎಸ್.ಮಣಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನೊಳಗೊಂಡಿರುತ್ತದೆ.

ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿಗೆ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮದಲ್ಲಿ ಅಥವಾ ಎರಡರಲ್ಲೂ ಒಟ್ಟಿಗೆ ಕನಿಷ್ಠ 30 ವರ್ಷಗಳ ಸೇವೆ ಸಲ್ಲಿಸಿ, ಕನ್ನಡ ಭಾμÉಯ ಬೆಳವಣಿಗೆಗೆ ವಿಶೇಷ ಕೊಡುಗೆ ನೀಡಿರುವವರನ್ನು ಪರಿಗಣಿಸಲಾಗುವುದು.

ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಯಾವುದೇ ಪತ್ರಿಕೆಯನ್ನು ಅಥವಾ ಪತ್ರಿಕಾ ಸಮೂಹವನ್ನು ಸಮರ್ಥವಾಗಿ ಕಟ್ಟಿ ಬೆಳೆಸಿದ ಹಾಗೂ ಪ್ರವೃತ್ತಿಯಲ್ಲಿ ಪತ್ರಕರ್ತರಾಗಿ, ವೃತ್ತಿಯಲ್ಲಿ ಪತ್ರಿಕಾಲಯದ ಮಾಲೀಕರು, ಆಡಳಿತಗಾರರಾಗಿ ಕನಿಷ್ಠ 30 ವರ್ಷ ಸೇವೆ ಸಲ್ಲಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಶಸ್ತಿಯು 2 ಲಕ್ಷ ರೂ. ಗಳ ಮೊತ್ತವನ್ನು ಒಳಗೊಂಡಿದ್ದು, ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಜುಲೈ 25ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರು ಅಥವಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಣsಡಿಚಿತಿಚಿಡಿಜ@gmಚಿiಟ.ಛಿom ಇಮೇಲ್ ವಿಳಾಸಕ್ಕೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *