ತುಮಕೂರು ಗ್ರಾಮಾಂತರ : ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ನೇತೃತ್ವದಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ಗೆ ಅನುಮತಿಯನ್ನು ಕೂಡಲೇ ರಾಜ್ಯಪಾಲರು ಹಿಂಪಡೆಯಬೇಕೆಂದು ಕಾಂಗ್ರೆಸ್ ಮುಖಂಡರು ಹೆಬ್ಬೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿಗಳ ಕಛೇರಿಗೆ ಆಗಮಿಸಿ ಈ ಕೂಡಲೇ ಪ್ರಾಸಿಕ್ಯೂಷನ್ಗೆ ನೀಡಿರುವ ಅನುಮತಿ ಹಿಂಪಡೆಯುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಶಾಸಕರಾದ ಗೌರಿಶಂಕರ್ ಮಾತನಾಡಿ, ಒಂದು ಸ್ಥಿರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ-ಜೆಡಿಎಸ್ ಪಕ್ಷಗಳು ರಾಜಕೀಯ ಅಸ್ತ್ರವಾಗಿ ರಾಜ್ಯಪಾಲರ ಕಚೇರಿಯನ್ನು ದುರುಪಯೋಗ ಪಡಿಸಿಕೊಂಡು ಇನ್ನಿಲ್ಲದ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಇಡೀ ಕಾಂಗ್ರೆಸ್ ಪಕ್ಷವಲ್ಲದೆ ಸಾರ್ವಜನಿಕರು ಸಹ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದು, ಸರ್ಕಾರವನ್ಬು ಪತನಗೊಳಿಸಿ, ವಾಮಮಾರ್ಗದಿಂದ ಅಧಿಕಾರ ಹಿಡಿಯುವ ಮೈತ್ರಿ ಪಕ್ಷಗಳ ಅಟಕ್ಕೆ ಎಂದಿಗೂ ಅವಕಾಶ ನೀಡುವುದಿಲ್ಲ ಎಂದರು.
ದೇಶ ಕಂಡ ಧೀಮಂತ ನಾಯಕ,ಬಡವರ ಅನ್ನದಾತ ರಾಜ್ಯ ಕಂಡಂತಹ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಬಾಹಿರವಾಗಿ ವಿರೋಧ ಪಕ್ಷಗಳ ಕುತಂತ್ರದಿಂದ ರಾಜಕೀಯ ದುರುದ್ದೇಶದಿಂದ ಕೇಂದ್ರದ ಭ್ರಷ್ಟ ಬಿಜೆಪಿ ಪಕ್ಷದ ಕೈಗೊಂಬೆಯಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ವಿರೋಧಿಯಾದ ಪ್ರಾಸಿಕ್ಯೂಶನ್ ಜಾರಿಮಾಡಿದ ರಾಜ್ಯದ ರಾಜ್ಯಪಾಲರ ವಿರುದ್ಧ ತುಮಕೂರು ಗ್ರಾಮಾಂತರ ಕ್ಷೇತ್ರದ ಹೆಬ್ಬೂರಿನಲ್ಲಿ ಪ್ರತಿಭಟನೆ ನಡೆಸಿದರು.
ತುಮಕೂರು ಗ್ರಾಮಾಂತರ ಕ್ಷೇತ್ರದ ನಿಕಟ ಪೂರ್ವ ಶಾಸಕರಾದ ಡಿ.ಸಿ.ಗೌರಿಶಂಕರ್ ಅವರ ನೇತೃತ್ವದಲ್ಲಿ ಸಾವಿರಾರು ಸಂಖ್ಯೆ ಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳವರ ಕಚೇರಿಯವರೆಗೂ ಸಾವಿರಾರು ಕಾರ್ಯಕರ್ತರ ಜೊತೆ ಬಂದು ಉಪಜಿಲ್ಲಾಧಿಕಾರಿಗಳವರ ಮುಖೇನ ರಾಷ್ಟ್ರಪತಿಗಳವರಿಗೆ ಮನವಿ ಸಲ್ಲಿಸಿದರು.