ಪ್ರೊ,ಜಿ.ಎಂ.ಶ್ರೀನಿವಾಸಯ್ಯನವರಿಗೆ ಅಂತಿಮ ನಮನ ಸಲ್ಲಿಸಿದ ಸಾಹಿತಿಗಳು-ಪತ್ರಕರ್ತರು

ತುಮಕೂರು : ಸೆಪ್ಟಂಬರ್ 2ರ ಸೋಮವಾರ ರಾತ್ರಿ ನಿಧನರಾದ ನಿವೃತ್ತ ಪಾಂಶುಪಾಲರು, ಪ್ರಗತಿಪರ ಚಿಂತಕರಾಗಿದ್ದ ಪ್ರೊ.ಜಿ.ಎಂ.ಶ್ರೀನಿವಾಸಯ್ಯರವರ ಪ್ರಾರ್ಥೀವ ಶರೀರದ ಅಂತಿಮ ದರ್ಶನವನ್ನು ಸಾಹಿತಿಗಳು, ಪತ್ರಕರ್ತರು, ಗಣ್ಯರು ಪಡೆದು ಅಂತಿಮ ನಮನ ಸಲ್ಲಿಸಿದರು.

ಸೆ.3ರಂದು ಬೆಳಗ್ಗೆ ತುಮಕೂರು ನಗರದ ವಿನಾಯಕ ಆಸ್ಪತ್ರೆ ರಸ್ತೆಯಲ್ಲಿರುವ ಜಿ.ಎಂ. ಶ್ರೀನಿವಾಸಯ್ಯ ಅವರ ಮನೆಗೆ ಭೇಟಿ ನೀಡಿದ ನಾಡೋಜ ಪ್ರೊ.ಬರಗೂರು ರಾಮಚಂದ್ರ, ಹೈಕೋರ್ಟ್ ವಕೀಲರು ಹಾಗೂ ಮಾಜಿ ಅಡ್ವಕೇಟ್ ಜನರಲ್ ಪ್ರೊ.ರವಿವರ್ಮಕುಮಾರ್, ಜನಪರ ಚಿಂತಕ ಕೆ.ದೊರೈರಾಜ್, ಹಿರಿಯ ಸಾಹಿತಿ ಎಸ್.ಜಿ.ಸಿದ್ದರಾಮಯ್ಯ, ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು, ಚಿಂತಕ ಕೆ.ದೊರೈರಾಜ್ ಅವರು ಶ್ರೀನಿವಾಸಯ್ಯ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.

ಕನ್ನಡ ಸಾಹಿತ್ಯ ಪರಿಷತ್ ತುಮಕೂರು ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ಸಾಹಿತಿ ನಾಗರಾಜ ಶೆಟ್ಟಿ, ಕಸಾಪ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಲೇಖಕಿ ಬಾ.ಹ.ರಮಾಕುಮಾರಿ, ಎಸ್.ಎ.ಖಾನ್, ಹೈಕೋರ್ಟ್ ವಕೀಲ ಎಚ್.ವಿ.ಮಂಜುನಾಥ್, ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್, ಹಿರಿಯ ಪತ್ರಕರ್ತ ಕುಚ್ಚಿಂಗಿ ಪ್ರಸನ್ನ, ವೈದ್ಯರಾದ ಡಾ.ಎಚ್.ವಿ.ರಂಗಸ್ವಾಮಿ, ಡಾ.ಅರುಂಧತಿ, ಸಾಹಿತಿ ಎನ್,ನಾಗಪ್ಪ, ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷರಾದ ಮಲ್ಲಿಕಾಬಸವರಾಜು, ಚರಕ ಆಸ್ಪತ್ರೆಯ ವೈದ್ಯರಾದ ಡಾ.ಬಸವರಾಜು, ಕೈಗಾರಿಕೋದ್ಯಮಿ ಡಿ.ಟಿ.ವೆಂಕಟೇಶ್, ಸಾಹಿತಿ ವಡ್ಡಗೆರೆ ನಾಗರಾಜಯ್ಯ, ನಗರಸಭೆ ಮಾಜಿ ಸದಸ್ಯರಾದ ನರಸೀಯಪ್ಪ, ಇಂಡಿಯನ್ ಎಕ್ಸ್‍ಪ್ರೆಸ್ ವರದಿಗಾರರಾದ ದೇವರಾಜು ಹಿರೇಹಳ್ಳಿ, ವಿರೂಪಾಕ್ಷ ಡ್ಯಾಗೇರಹಳ್ಳಿ, ಉಮಾಪತಿ.ಸಿ.ಕೆ. ಸೇರಿದಂತೆ ಹಲವರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

ಮಧ್ಯಾಹ್ನ ನಗರದ ಗಾರ್ಡನ್ ರಸ್ತೆಯ ರುದ್ರಭೂಮಿಯಲ್ಲಿ ಪ್ರೊ.ಜಿ.ಎಂ.ಶ್ರೀನಿವಾಸಯ್ಯನವರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು.

Leave a Reply

Your email address will not be published. Required fields are marked *