ತುಮಕೂರು: ಗುಬ್ಬಿ ತಾಲ್ಲೋಕಿನ, ಕಡಬಾ ಹೋಬಳಿಯ ಡಾ. ಗೋವಿಂದರಾಜು ಎಂ ಕಲ್ಲೂರು ಅವರ ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಕಥಾಸಂಕಲನಕ್ಕೆ ಶಿವಮೊಗ್ಗದ ಕರ್ನಾಟಕ ಸಂಘವು ನೀಡುವ 2023ನೇ ಸಾಲಿನ ಪ್ರತಿಷ್ಠಿತ ಡಾ. ಯು.ಆರ್. ಅನಂತಮೂರ್ತಿ ಸಣ್ಣಕಥಾ ಪುಸ್ತಕ ಬಹುಮಾನ ಲಭಿಸಿದೆ.
ಬಹುಮಾನವು 10,000 ನಗದು ಪುರಸ್ಕಾರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದ್ದು ಸೆಪ್ಟಂಬರ್ 22 ರಂದು ಬಹುಮಾನ ಪ್ರಧಾನ ಸಮಾರಂಭ ನಡೆಯಲಿದೆ ಎಂದು ಶಿವಮೊಗ್ಗದ ಕರ್ನಾಟಕ ಸಂಘವು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಗೋವಿಂದರಾಜು ಸದ್ಯ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.