ಸಿದ್ಧಾರ್ಥ ದಂತ ವೈದ್ಯಕೀಯ ಕಾಲೇಜಿನ ವತಿಯಿಂದ ದಂತ ತಪಾಸಣೆ

ತುಮಕೂರು: ನಗರದ ಶ್ರೀ ಸಿದ್ಧಾರ್ಥ ದಂತ ವೈದ್ಯಕೀಯ ಕಾಲೇಜಿನ ವತಿಯಿಂದ ಜಿಲ್ಲೆಯ ಮಧುಗಿರಿಯಲ್ಲಿ ಸಾರ್ವಜನಿಕ ಆರೋಗ್ಯ ದಂತ ಚಿಕಿತ್ಸಾ ಶಿಬಿರ ದಂತ ತಪಾಸಣೆ ಮತ್ತು ದಂತ ರಕ್ಷಣೆ ಜಾಗೃತಿ ಶಿಬಿರವನ್ನು ನಡೆಸಲಾಯಿತು.

ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಶಾಲಾ ಮಕ್ಕಳಿಗೆ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಆಂದೋಲನದಲ್ಲಿ ಮಾತನಾಡಿದ ಶ್ರೀ ಸಿದ್ಧಾರ್ಥ ದಂತ ವೈದ್ಯಕೀಯ ಕಾಲೇಜಿನ ಸಮುದಾಯ ದಂತ ವೈದ್ಯಕೀಯ ವಿಭಾಗದ ರೀಡರ್ ಡಾ. ದರ್ಶನಾ ಬೆನ್ನಾಡಿ, ಹಲ್ಲಿಗೆ ಸಂಬAಧಿಸಿದ ರೋಗಗಳ ಬಗ್ಗೆ ಮುಂಜಾಗ್ರತೆ ಅಗತ್ಯ. ದೇಹದ ಆರೋಗ್ಯ ಶುಚಿತ್ವಕ್ಕೆ ಪ್ರಾಮುಖ್ಯತೆ ನೀಡುವಂತೆ ಬಾಯಿ ಮತ್ತು ದಂತ ಶುಚಿತ್ವಕ್ಕೂ ಮಹತ್ವ ಕೊಡಬೇಕು ಎಂದರು.

ಮಕ್ಕಳು ಗುಣಮಟ್ಟದ ಶಿಕ್ಷಣದಿಂದ ಪ್ರಯೋಜನಗಳನ್ನು ಪಡೆಯಲು ಮತ್ತು ಸಶಕ್ತ ವ್ಯಕ್ತಿಗಳಾಗಿ ಬೆಳೆಯಲು ಉತ್ತಮ ಆರೋಗ್ಯ ಮತ್ತು ಉತ್ತಮ ಅಭ್ಯಾಸಗಳು ಬಹಳ ಮುಖ್ಯವಾದ ಅಂಶಗಳಾಗಿವೆ. ಶಾಲಾ ಮಕ್ಕಳಲ್ಲಿ ಹಲ್ಲು ಕೊಳೆತಕ್ಕೆ ಕಾರಣವಾಗುವ ಆಹಾರದ ಆಯ್ಕೆಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ಹೌಸ್ ಸರ್ಜನ್ಸ್ಗಳಾದ ಯಶಸ್ವಿನಿ, ರಕ್ಷಿತಾ, ರುತ್, ಇಂಪನಾ ಹರಿಪ್ರಿಯಾ, ಹಜ್ರಾ, ಹಿಫ್ಜಾಹಾಗು ವಿದ್ಯಾರ್ಥಿಗಳು ಭಾಗವಹಿಸಿದರು. ಕಾರ್ಯಾಗಾರದಲ್ಲಿ ‘ಹಲ್ಲು ಮತ್ತು ಕಣ್ಣುಗಳನ್ನು ಹೇಗೆ ರಕ್ಷಿಸಿಕೊಳ್ಳುವುದು’ ಎಂಬ ವಿಷಯದ ಕುರಿತು ವೈದ್ಯರು ಮಕ್ಕಳಿಗೆ ಪರೀಕ್ಷೆ ನಡೆಸಿ ಮಾರ್ಗದರ್ಶನ ನೀಡಿದರು. ಹೆಚ್ಚು ವಿಡಿಯೋ ಮತ್ತು ಕಂಪ್ಯೂಟರ್ ಆಟಗಳನ್ನು ಆಡದಂತೆ ವಿದ್ಯಾರ್ಥಿಗಳಿಗೆ ಒತ್ತು ನೀಡಿದರು ಮತ್ತು ಮಾರ್ಗದರ್ಶನ ನೀಡಿದರು. ಸುಮಾರು 200ಕ್ಕೂ ಹೆಚ್ಚು ಮಕ್ಕಳನ್ನು ಪರೀಕ್ಷಿಸಲಾಯಿತು ಮತ್ತು ಅಗತ್ಯಕ್ಕೆ ಅನುಗುಣವಾಗಿ ಚಿಕಿತ್ಸೆಯನ್ನು ಅನುಸರಿಸಲು ಸಲಹೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮಸ್ಥರಿಗೂ ದಂತ ತಪಾಸಣೆ ನಡೆಸಿ, ಚಿಕಿತ್ಸೆ ನೀಡಲಾಯಿತು. ಸುಮಾರು 530 ಮಂದಿ ಗ್ರಾಮಸ್ಥರು ಶಿಬಿರದ ಪ್ರಯೋಜನ ಪಡೆದರು.

Leave a Reply

Your email address will not be published. Required fields are marked *