ತುಮಕೂರು : ಕರ್ನಾಟಕ ಲೇಖಕಿಯರ ಸಂಘದ ತುಮಕೂರು ಜಿಲ್ಲಾ ಶಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮತ್ತು ದಾರಿ ಬುತ್ತಿ ಬಳಗ, ಸಹಯೋಗದಲ್ಲಿ ಅಕ್ಟೋಬರ್ 27ರ ಭಾನುವಾರ ಸಂಜೆ 04-30 ಕ್ಕೆ ತುಮಕೂರಿನ ಕನ್ನಡ ಭವನದಲ್ಲಿ ಮೇ.ನಾ. ತರಂಗಿಣಿ ಅವರ “ಒಂದಿಷ್ಟೇ ಇಷ್ಟು ತಾವು ” ಕವನ ಸಂಕಲನ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಚಿಂತಕರಾದ ಕೆ.ದೊರೈರಾಜು, ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿಶ್ರಾಂತ ಕನ್ನಡ ಪ್ರಾಧ್ಯಾಪಕರಾದ ಡಾ. ರಾಜಪ್ಪ ದಳವಾಯಿ ಪುಸ್ತಕ ಬಿಡುಗಡೆ ಮಾಡಲಿದ್ದು, ಲೇಖಕಿ ಗೀತಾಲಕ್ಷ್ಮಿ ಎನ್. ತಿಪಟೂರು ಅವರು ಕೃತಿಯನ್ನು ಕುರಿತು ಮಾತನಾಡುವರು, ಕರ್ನಾಟಕ ಲೇಖಕಿಯರ ಸಂಘದ ತುಮಕೂರು ಶಾಖೆ ಜಿಲ್ಲಾಧ್ಯಕ್ಷರಾದ ಜಿ. ಮಲ್ಲಿಕಾ ಬಸವರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಪನಿರ್ದೇಶಕರಾದ ಡಾ. ಬಾಲಗುರುಮೂರ್ತಿ, ಜಿಲ್ಲಾ ಕಸಾಪ ಅಧ್ಯಕ್ಷರಾದ ಕೆ.ಎಸ್.ಸಿದ್ಧಲಿಂಗಪ್ಪ, ಹಿರಿಯ ಲೇಖಕಿ ಬಾ. ಹ. ರಮಾಕುಮಾರಿ, ವಿಶ್ರಾಂತ ಪ್ರಾಚಾರ್ಯರಾದ ಪ್ರೊ. ಕೆ. ಸಿ. ಬಸಪ್ಪ, ನಿವೃತ್ತ ಪ್ರಾಚಾರ್ಯರು ಹಾಗೂ ಸಾಮಾಜಿಕ ಹೋರಾಟಗಾರ್ತಿ ಇಂದಿರಮ್ಮ ಭಾಗವಹಿಸಲಿದ್ದಾರೆ.