ದೇಶದಲ್ಲಿಯೇ ಪ್ರಪ್ರಥಮವಾಗಿ ಆರ್ಥಿಕ ಹಿಂದುಳಿದ ವಿ.ವಿ.ವಿದ್ಯಾರ್ಥಿಗಳಿಗೆ ಬಿಸಿ ಊಟದ ವ್ಯವಸ್ಥೆ

ತುಮಕೂರು : ಗ್ರಾಮೀಣ ಪ್ರದೇಶದ ಬಡ ಮತ್ತು ನಿರ್ಗತಿಕ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿ ಊಟ ನೀಡಲು ಶ್ರೀ ಅನ್ನಪೂರ್ಣೇಶ್ವರಿ ಊಟದ ಸಮತಿಯಡಿಯಲ್ಲಿ ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾರಂಭಿಸಲಾಗುವುದು ಎಂದು ಪಾವಗಡ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಶ್ರೀ.ಡಾ.ಜಪಾನಂದ ಸ್ವಾಮೀಜಿ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಪೆÇ್ರ. ಎಂ. ವೆಂಕಟೇಶ್ವರಲು ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮಾಚ್ 6 ಸೋಮವಾರ ಬೆಳಿಗ್ಗೆ 11ಗಂಟೆಗೆ ತುಮಕೂರು ವಿಶ್ವವಿದ್ಯಾನಿಲಯದ ಶ್ರೀ ಶಿವಕುಮಾರಸ್ವಾಮಿಗಳ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಇಡೀ ದೇಶದಲ್ಲಿಯೇ ಪ್ರಪ್ರಥಮವಾಗಿ ವಿಶ್ವವಿದ್ಯಾಲಯದ ಆರ್ಥಿಕವಾಗಿ ಹಿಂದುಳಿದ ಸ್ನಾತಕಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮಧ್ಯಾಹ್ನದ ಆಹಾರ ವಿತರಣಾ ಯೋಜನೆ ಆರಂಭವಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಮೈಸೂರು ಸಂಸ್ಥಾನದ ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮಾಡಲಿದ್ದಾರೆ, ಅಧ್ಯಕ್ಷತೆಯನ್ನು ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸರ್ವೋಚ್ಚ ನ್ಯಾಯಾಲಯ ನಿವೃತ್ತ ನ್ಯಾಯಾಧೀ±ರಾದ ಎನ್. ಸಂತೋμï ಹೆಗ್ಡೆ, ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಶ್ರೀ.ಡಾ.ಜಪಾನಂದ ಸ್ವಾಮೀಜಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ವಿಶೇಷ ಆಹ್ವಾನಿತರಾಗಿ ಕರ್ನಾಟಕ ಉಚ್ಚ ನ್ಯಾಯಾಲಯ ನಿವೃತ್ತ ನ್ಯಾಯಾಧೀಶರಾದ ಶ್ರೀಮತಿ ರತ್ನಕಲಾ, ಹಾಗೂ ಬೆಂಗಳೂರು ಅದಮ್ಯ ಚೇತನದ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್, ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಲಾದ ಪೆÇ್ರ. ಎಂ. ವೆಂಕಟೇಶ್ವರಲು ಭಾಗವಹಿಸುವರು ಎಂದು ತಿಳಿಸಿದರು.

ಈ ಮಧ್ಯಾಹ್ನ ಊಟದ ಖರ್ಚು-ವೆಚ್ಚವನ್ನು ವಿವಿಧ ಉದ್ಯಮಿಗಳು ಹಾಗೂ ಧಾನಿಗಳು ಭರಿಸಲಿದ್ದಾರೆ, ಸುಮಾರು 1500 ವಿದ್ಯಾರ್ಥಿಗಳಿಗೆ ಬಿಸಿ ಊಟದ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಶ್ರೀ ಜಪಾನಂದ ಸ್ವಾಮೀಜಿ ತಿಳಿಸಿದರು.

ವಿಶ್ವವಿದ್ಯಾನಿಲಯದ ಕುಲಸಚಿವರಾದ ನಾಹೀದಾ ಜಮ್ ಜಮ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *