ಸಮರ್ಪಕ ನೀರು ಪೂರೈಕೆ: ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲು ಸೂಚನೆ

ತುಮಕೂರು : ಬೇಸಿಗೆಯ ದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆಯಾಗಬೇಕು. ಕೊಳವೆ ಬಾವಿಗಳು ಒಣಗದಂತೆ ಮುನ್ನೆಚ್ಚರಿಕೆ ವಹಿಸಿ, ಅವುಗಳನ್ನು ಪುನಶ್ಚೇತನಗೊಳಿಸುವ ಕೆಲಸ ಆಗಬೇಕು ಮತ್ತು ಶಾಸಕರ ಅಧ್ಯಕ್ಷತೆಯಲ್ಲಿ ಬರನಿರ್ವಹಣೆಗೆ ಸಂಬಂಧಿಸಿದಂತೆ ಟಾರ್ಸ್ ಫೆÇೀರ್ಸ್ ಸಭೆಯನ್ನು ಕರೆದು ಮೂರ್ನಾಲ್ಕು ದಿನದೊಳಗಾಗಿ ವರದಿ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ: ಜಿ. ಪರಮೇಶ್ವರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರಿಂದು ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಕರೆಯಲಾಗಿದ್ದ ತಾಲೂಕುಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದ ಪರಿಶೀಲನ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡುತ್ತಾ, ಎಲ್ಲಾ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರುಗಳು ಹಾಗೂ ತಹಶೀಲ್ದಾರ್‍ಗಳು ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಾರ್ಯನಿರತರಾಗಬೇಕು ಮತ್ತು ಬೋರ್‍ವೆಲ್‍ಗಳಲ್ಲಿ ಹೈಡ್ರೋಪ್ಯಾಕ್ಚರ್ ತಂತ್ರಜ್ಞಾನ ಉಪಯೋಗಿಸಿ ಬೋರ್‍ವೆಲ್‍ಗಳನ್ನು ಪುನಶ್ಚೇತನಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಮುಂದಿನ ಜೂನ್ ತಿಂಗಳ ವೇಳೆಗೆ ಜಿಲ್ಲೆಯಲ್ಲಿನ 792 ಕೊಳವೆ ಬಾವಿಗಳು ಸಮಸ್ಯಾತ್ಮಕ ಕೊಳವೆಬಾವಿಗಳೆಂದು ಗುರುತಿಸಲಾಗಿದೆ. ಕಳೆದ ಮೂರು ನಾಲ್ಕು ವರ್ಷಗಳ ಹಿಂದೆ ಸುರಿದ ಉತ್ತಮ ಮಳೆಯಿಂದಾಗಿ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಅμÉ್ಟೀನೂ ಕುಸಿದಿರುವುದಿಲ್ಲ. ಅಂತರ್ಜಲ ಮಟ್ಟ ಅಂದಾಜು 100 ಅಡಿಯ ಮಿತಿಯೊಳಗೆ ಇದೆ. ಆದುದರಿಂದ ಈಗಲೇ ಇಳುವರಿ ಕಡಿಮೆ ಇರುವಂತಹ ಕೊಳವೆ ಬಾವಿಗಳನ್ನು ಗುರುತಿಸಿ ಅಂತರ್ಜಲ ಮಟ್ಟ ಕಾಪಾಡುವಂತೆ ಸೂಚಿಸಿದರು.

ಜಿಲ್ಲೆಯಲ್ಲಿನ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಇದರ ಸರಿಯಾದ ನಿರ್ವಹಣೆಯಾಗಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಓ ಅವರಿಗೆ ಸಚಿವರು ಸೂಚಿಸಿದರು.

ಪಶು ಸಂಗೋಪನ ಇಲಾಖೆ ವತಿಯಿಂದ ಮುಂದಿನ ದಿನಕ್ಕೆ ಬೇಕಾಗುವಷ್ಟು ಅಗತ್ಯ ಮೇವು ಖರೀದಿಗೆ ಸಂಬಂಧಿಸಿದಂತೆ ಟೆಂಡರ್ ಕರೆಯಬೇಕು. ಇದರಿಂದ ಮುಂದಿನ ಬೇಸಿಗೆ ದಿನಗಳಲ್ಲಿ ಮೇವಿನ ಬ್ಯಾಂಕುಗಳನ್ನು ಅಗತ್ಯವಿದ್ದರೆ ಸ್ಥಾಪಿಸಲು ಸಹಕಾರಿಯಾಗುತ್ತದೆ. ಅಧಿಕಾರಿಗಳು ದಿನದ 24 ಗಂಟೆಯೂ ಕೆಲಸ ಮಾಡಬೇಕು ಯಾವುದೇ ವಿಳಂಬಕ್ಕೆ ಆಸ್ಪದವಿಲ್ಲ ಎಂದು ತಿಳಿಸಿದರು.

ಇದಕ್ಕೆ ಉತ್ತರಿಸಿದ ಪಶುಸಂಗೋಪನ ಇಲಾಖೆಯ ಉಪನಿರ್ದೇಶಕರು, ಜಿಲ್ಲೆಯಲ್ಲಿ ಈಗಾಗಲೇ ಒಂದು ಲಕ್ಷ ಮೇವಿನ ಕಿಟ್ಟುಗಳನ್ನು ಅಂದಾಜು 50,000ಕ್ಕೂ ಹೆಚ್ಚು ರೈತರಿಗೆ ವಿತರಣೆ ಮಾಡಿದ್ದು, ಈ ಪೈಕಿ 40,000ಕ್ಕೂ ಹೆಚ್ಚು ರೈತರು ಈಗಾಗಲೇ ಬಿತ್ತನೆ ಮಾಡಿದ್ದಾರೆ. ಇನ್ನುಳಿದ ರೈತರು ಬೆಳೆಕಟಾವಿನ ನಂತರ ಮೇವು ಬೆಳೆಯುವುದಾಗಿ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಎರಡು ಲಕ್ಷ ಮೇವಿನ ಕಿಟ್ಟುಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಮುಂದಿನ ಫೆಬ್ರವರಿ ಮಾಹೆಯ ವೇಳೆಗೆ ಒಟ್ಟಾರೆ ಜಿಲ್ಲೆಯಲ್ಲಿ 1.38 ಲಕ್ಷ ಟನ್ ಹೊಸ ಮೇವಿನ ಲಭ್ಯತೆಯಾಗಲಿದ್ದು ಐದು ವಾರಗಳಿಗೆ ಸಾಕಾಗುತ್ತದೆ ಎಂದು ಉತ್ತರಿಸಿದರು.

Leave a Reply

Your email address will not be published. Required fields are marked *