ಪರಿಭಾವಿತ ಅರಣ್ಯ ಪ್ರದೇಶ : ಜಂಟಿ ಸರ್ವೇ ಕಾರ್ಯ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿ ಸೂಚನೆ

ತುಮಕೂರು : ಜಿಲ್ಲೆಯಲ್ಲಿ ಪರಿಭಾವಿತ ಅರಣ್ಯಕ್ಕಾಗಿ ಗುರುತಿಸಲಾಗಿರುವ 13,000 ಹೆಕ್ಟೇರ್ ಪ್ರದೇಶವನ್ನು ಅರಣ್ಯ, ಕಂದಾಯ ಮತ್ತು ಭೂ ದಾಖಲೆಗಳ ಇಲಾಖೆಗಳು ಜಂಟಿಯಾಗಿ ಸರ್ವೇ ನಡೆಸಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 13,000 ಹೆಕ್ಟೇರ್ ಪ್ರದೇಶವನ್ನು ಪರಿಭಾವಿತ ಅರಣ್ಯ ಪ್ರದೇಶವೆಂದು ಗುರುತಿಸಲಾಗಿದೆ. ಗುರುತಿಸಲಾಗಿರುವ ಪ್ರದೇಶಗಳಲ್ಲಿ ಸರ್ಕಾರಿ/ಖಾಸಗಿ ಪ್ರದೇಶಗಳನ್ನು ಪ್ರತ್ಯೇಕಿಸಬೇಕೆಂದು ತಿಳಿಸಿದರು.

ಕಂದಾಯ ಇಲಾಖೆ ವ್ಯಾಪ್ತಿಗೆ ಬರುವ ಸಾಗುವಳಿ ಚೀಟಿ, ಬಗರ್ ಹುಕುಂ, ಆಧಾರ್ ಸೀಡಿಂಗ್, ಪಿಂಚಣಿ, ಜನತಾ ದರ್ಶನ, ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವ ಮೂಲಕ ಜಿಲ್ಲೆಯಲ್ಲಿ ಜನಸ್ನೇಹಿ ಆಡಳಿತವನ್ನು ಬಲ ಪಡಿಸಬೇಕು ಎಂದು ತಿಳಿಸಿದರು.

ತಹಶೀಲ್ದಾರ್‍ಗಳು ತಮ್ಮ ವ್ಯಾಪ್ತಿಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳೊಟ್ಟಿಗೆ ಪ್ರತಿದಿನ ಪ್ರಗತಿ ಪರಿಶೀಲನಾ ಸಭೆ ಕೈಗೊಂಡು ಬಗರ್ ಹುಕುಂ ಸಂಬಂಧಿಸಿದಂತೆ ಪ್ರಗತಿ ಸಾಧಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ತಹಶೀಲ್ದಾರ್ ರಾಜೇಶ್ವರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *