ತುಮಕೂರು- 2023ರ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಅಭಿಪ್ರಾಯಪಟ್ಟರು.
ರಾಜ್ಯಾದ್ಯಂತ ಜನಸಂಕಲ್ಪ ಯಾತ್ರೆ ಮಾಡುತ್ತಿದ್ದೇವೆ. ಹೈದರಾಬಾದ್ ಕರ್ನಾಟಕ, ಉತ್ತರ ಕರ್ನಾಟಕ, ಬೆಳಗಾಂ ಜಿಲ್ಲೆಗಳಲ್ಲಿ ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯದ ಜನ ಬೆಂಬಲ ಕೊಡುತ್ತಿರುವುದನ್ನು ನೋಡಿದರೆ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸ ತಮಗಿದೆ ಎಂದರು.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಬಿ. ಸುರೇಶ್‍ಗೌಡ ಅವರು ನಿರ್ಮಿಸಿರುವ ಗ್ರಾಮಾಂತರ ಬಿಜೆಪಿ ಕಚೇರಿ ಶಕ್ತಿಸೌಧ ಉದ್ಘಾಟನೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯಾದ್ಯಂತ ಜನಸಂಕಲ್ಪ ಯಾತ್ರೆ ನಡೆಯುತ್ತಿದೆ. ಅದರಂತೆ ತುಮಕೂರು ಜಿಲ್ಲೆಗೂ ಬಂದಿದ್ದೇವೆ. ಈಗ ಕುಣಿಗಲ್ ಮತ್ತು ಕೊರಟಗೆರೆ ಕ್ಷೇತ್ರಗಳಲ್ಲಿ ಯಾತ್ರೆ ನಡೆಯಲಿದ್ದು, ಮುಂದಿನ ದಿನಗಳಲ್ಲಿ ತುಮಕೂರು ಜಿಲ್ಲೆಯ 11 ಕ್ಷೇತ್ರಗಳಲ್ಲೂ ಜನಸಂಕಲ್ಪ ಯಾತ್ರೆ ನಡೆಯುತ್ತದೆ ಎಂದರು
ಕುಣಿಗಲ್ ಕ್ಷೇತ್ರದ ಬಿಜೆಪಿ ಅಕಾಂಕ್ಷಿ ಅಭ್ಯರ್ಥಿ ಗಲಾಟೆ ವಿಚಾರದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಎಲ್ಲಿ ಪಕ್ಷ ಆರಿಸಿ ಬರುತ್ತದೆ ಎನ್ನುವ ಭರವಸೆ ಇರುತ್ತದೋ ಅಲ್ಲಿ ಪೈಪೆÇೀಟಿ ಇದ್ದೇ ಇರುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷ ಆಗಿರುವುದರಿಂದ ಇವೆಲ್ಲವನ್ನು ಸರಿದೂಗಿಸಿ ವಿಜಯ ಪತಾಕೆಯನ್ನು ಹಾರಿಸುತ್ತೇವೆ ಎಂದು ಹೇಳಿದರು.
ಮಾಜಿ ಶಾಸಕ ಸುರೇಶ್ ಗೌಡ ಕೊಲೆಗೆ ಸುಫಾರಿ ಕೊಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣವನ್ನು ಪೆÇಲೀಸರು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ತನಿಖೆ ಮಾಡಿ ಯಾರ್ಯಾರು ಕಾರಣೀಭೂತರಿದ್ದಾರೆ, ಅವರ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದರು.
ಈ ಪ್ರಕರಣದ ಸಂಬಂಧ ನಾನು ಈಗಾಗಲೇ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ತನಿಖೆಯಾದ ಮೇಲೆ ಎಲ್ಲವೂ ಹೊರಗೆ ಬರುತ್ತದೆ ಎಂದು ಅವರು ತಿಳಿಸಿದರು.