ತುಮಕೂರು : ಭಾರತ ಚುನಾವಣಾ ಆಯೋಗವು ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬಂಧ ಮೇ 9ರಂದು ಅಧಿಸೂಚನೆ ಹೊರಡಿಸಿದೆ.
ಅಧಿಸೂಚನೆಯನ್ವಯ ಚುನಾವಣಾ ನಾಮಪತ್ರ ಸಲ್ಲಿಸಲು ಮೇ 16 ಕಡೆಯ ದಿನವಾಗಿದ್ದು, ಮೇ 17ರಂದು ಅಭ್ಯರ್ಥಿಗಳ ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ನಾಮಪತ್ರ ಹಿಂಪಡೆಯಲು ಮೇ 20ರಂದು ಕಡೆಯ ದಿನವಾಗಿದ್ದು, ಜೂನ್ 3ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತ ಎಣಿಕೆ ಕಾರ್ಯ ಜೂನ್ 6ರಂದು ನಡೆಯಲಿದ್ದು, ಜೂನ್ 12ಕ್ಕೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.