ತುಮಕೂರು : ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ತುಮಕೂರು ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯನ್ನು ರದ್ದು ಮಾಡಲಾಗಿದೆ.
ಏಪ್ರಿಲ್ 24ರ ಸಂಜೆ 6 ಗಂಟೆಯೊಳಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಅಮಿತ್ ಷಾರವರು ಬೇರೆ ಕಡೆÉ ಪ್ರಚಾರ ಸಭೆಯಲ್ಲಿ ಭಾಗವಹಿಸುವುದರಿಂದ ಸಮಯಾವಕಾಶ ಕಡಿಮೆ ಇರುವುದರಿಂದ ತುಮಕೂರು ಜಿಲ್ಲೆಯ ಕೆ.ಬಿ.ಕ್ರಾಸ್ ನಲ್ಲಿ ಹಮ್ಮಿಕೊಂಡಿದ್ದ ಅಮಿತ್ ಷಾ ಅವರ ಪ್ರಚಾರ ಸಭೆ ರದ್ದಾಗಿದೆ ಎಂದು ತಿಳಿದು ಬಂದಿದೆ.
ಒಂದು ಮೂಲದ ಪ್ರಕಾರ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಗೆ ಪ್ರಚಾರಕ್ಕೆ ಬಂದಿದ್ದಾಗ ಅಮಿತ್ ಷಾ ಅವರು ತುಮಕೂರು ಜಿಲ್ಲೆಗೆ ತೆಂಗು ಅಭಿವೃದ್ಧಿ ಪಾರ್ಕ್ ಬಜೆಟ್‍ನಲ್ಲಿ ಘೋಷಣೆ ಮಾಡುವುದಾಗಿ ಭರವಸೆ ನೀಡಿದ್ದರು, ಈ ಭರವಸೆ ಈಡೇರಿಸದ ಹಿನ್ನಲೆಯಲ್ಲಿ ಅಮಿತಾ ಷಾ ಅವರು ಪ್ರಚಾರಕ್ಕೆ ಬರಲು ಹಿಂದೇಟು ಹಾಕಿದ್ದಾರೆನ್ನಲಾಗಿದೆ.