ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ದವನ ಭೂಮಿಕ ಸಾಂಸ್ಕೃತಿಕ ಟ್ರಸ್ಟ್, ಜಿಲ್ಲಾ ಲೇಖಕಿಯರ ಸಂಘ, ಪ್ರಕೃತಿ ಜನಸೇವ ಟ್ರಸ್ಟ್ ವತಿಯಿಂದ ಏಪ್ರಿಲ್ 5ರಂದು ಮಧ್ಯಾಹ್ನ 3.30 ಗಂಟೆಗೆ ತುಮಕೂರಿನ ಕನ್ನಡ ಭವನದಲ್ಲಿ ಡಾ.ಓ.ನಾಗರಾಜು ಬರೆದಿರುವ ಹಿಂದೂಪುರ ಕಾದಂಬರಿ ಬಿಡುಗಡೆ ಸಮಾರಂಭ ಏರ್ಪಡಿಸಲಾಗಿದೆ.
ಹಿಂದೂಪುರ ಕಾದಂಬರಿಯನ್ನು ಪತ್ರಕರ್ತ ಚ.ಹ.ರಘುನಾಥ್ ಬಿಡುಗಡೆ ಮಾಡುವರು. ಬಹುಮುಖಿ ಸಂಸ್ಕೃತಿ ಚಿಂತಕ ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಸಮಾರಂಭದ ಅಧ್ಯಕ್ಷತೆ ವಹಿಸುವರು.
ಕೃತಿ ಕುರಿತು ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಡಾ.ಎಚ್.ಲಕ್ಷ್ಮೀನಾರಾಯಣಸ್ವಾಮಿ ಮಾತನಾಡುವರು. ಪತ್ರಿಕೋದ್ಯಮಿ ಎಸ್.ನಾಗಣ್ಣ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ.ಲಕ್ಷ್ಮಣ್ ದಾಸ್ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಹಿರಿಯ ಹೋರಾಟಗಾರ ಕುಂದೂರು ತಿಮ್ಮಯ್ಯ, ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ಕಲೇಸಂ ಜಿಲ್ಲಾಧ್ಯಕ್ಷೆ ಮಲ್ಲಿಕಾ ಬಸವರಾಜು, ಯುವ ನಾಯಕ ವಿರೂಪಾಕ್ಷ ಡ್ಯಾಗೇರಹಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಬಸವರಾಜಪ್ಪ ಆಪಿನಕಟ್ಟೆ ಭಾಗವಹಿಸುವರು. ಕೃತಿಕಾರ ಡಾ.ಓ.ನಾಗರಾಜ ಇರುವರು.