
ತುಮಕೂರು : ತುಮಕೂರಿನಲ್ಲಿ ಮತ ಚಲಾವಣೆ ಮಾಡಿದ ಬೊಮ್ಮನಹಳ್ಳಿ ಬಾಬು ಅಲಿಯಾಸ್ ಅಟಿಕಾ ಬಾಬು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದಲೇ ಚುನಾವಣಾ ಕಣದಲ್ಲಿ ಇರುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಅವರು ನಿನ್ನೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮಾತುಕತೆಯನ್ನು ನಡೆಸಿದ್ದು, ತುಮಕೂರಿನಲ್ಲಿ ನನಗೆ ಟಿಕೆಟ್ ತಪ್ಪಿಸಿದ ನಾಯಕರು ನನ್ನನ್ನು ಕರೆಸಿಕೊಂಡು ನಾನು ತಪ್ಪು ಮಾಡಿದೆ, ಮುಂದಿನ ದಿನಗಳಲ್ಲಿ ನಿಮಗೆ ಕಾಂಗ್ರೆಸ್‍ನಲ್ಲಿ ರಾಜಕೀಯ ಭವಿಷ್ಯವಿದೆ ಎಂದು ಹೇಳಿರುವುದಾಗಿ ತಿಳಿಸಿದರು.
ಪತ್ರಕರ್ತರು ಪದೇ ಪದೇ ಪ್ರಶ್ನಿಸಿದಾಗ ಮುಂಬುರುವ ಚುನಾವಣೆಯ ವೇಳೆಗೆ ನಿಮ್ಮ ಪ್ರಶ್ನೆಗೆ ಉತ್ತರ ಸಿಗಲಿದೆ ಎಂದು ಮಾರ್ಮಿಕವಾಗಿ ಹೇಳಿದರು.
ಇಷ್ಟೆ ಅಲ್ಲದೆ ನಾನು ತುಮಕೂರಿನ ಜನರ ಮಧ್ಯೆಯೇ ಇರಲಿದ್ದೇನೆ ಅವರ ಸಮಸ್ಯೆಗಳಿಗೆ ಸ್ಪಂದಿಸಲಿದ್ದೇನೆ ಎಂದು ಹೇಳಿದರು.
ತೆರೆಮರೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿರುವ ಅಟಿಕಾ ಬಾಬು ಲೋಕಸಭೆಯ ಟಿಕೆಟ್ ಭೇಡಿಕೆಯನ್ನು ಮುಂದಿಟ್ಟಿದ್ದಾರೆಂದು ಹೇಳಲಾಗುತ್ತಿದೆ, ಕಾಂಗ್ರೆಸ್ ನಾಯಕರು ಸಹ ಇದಕ್ಕೆ ಸಮ್ಮತಿಸುವ ಸೂಚನೆಗಳಿವೆ ಎನ್ನಲಾಗುತ್ತಿದ್ದೆ.