ಆ.15ರಂದು 78ನೇ ಸ್ವಾತಂತ್ರ್ಯ ದಿನಾಚರಣೆ-2024

ತುಮಕೂರು : ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 15ರ ಗುರುವಾರ ಬೆಳಿಗ್ಗೆ 9 ಗಂಟೆಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ‘78ನೇ ಸ್ವಾತಂತ್ರ್ಯ ದಿನಾಚರಣೆ-2024’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರು ಹಾಗೂ ಸಂಸದರಾದ ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಜಿ. ಪರಮೇಶ್ವರ  ಅವರು ಅಂದು ಬೆಳಿಗ್ಗೆ 9 ಗಂಟೆಗೆ ರಾಷ್ಟ್ರ ಧ್ವಜಾರೋಹಣ ಮಾಡಿ, ಗೌರವರಕ್ಷೆ ಸ್ವೀಕರಿಸುವರು.

ಸಹಕಾರ ಸಚಿವ ಕೆ.ಎನ್. ರಾಜಣ್ಣ, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ತುಮಕೂರು ನಗರ ವಿಧಾನಸಭಾ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಎಂ.ಕಾರಜೋಳ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ: ಸಿ.ಎನ್. ಮಂಜುನಾಥ್, ಶಾಸಕರಾದ ಡಾ: ಹೆಚ್.ಡಿ. ರಂಗನಾಥ್, ಕೆ.ಎ.ತಿಪ್ಪೇಸ್ವಾಮಿ, ಚಿದಾನಂದ ಎಂ.ಗೌಡ, ರಾಜೇಂದ್ರ ಆರ್., ಕೆ.ಷಡಾಕ್ಷರಿ, ಎಂ.ಟಿ.ಕೃಷ್ಣಪ್ಪ, ಸಿ.ಬಿ.ಸುರೇಶ್‍ಬಾಬು, ಬಿ. ಸುರೇಶ್‍ಗೌಡ, ಹೆಚ್.ವಿ. ವೆಂಕಟೇಶ್, ವಿಧಾನಪರಿಷತ್‍ನ ಶಾಸಕ ಡಿ.ಟಿ. ಶ್ರೀನಿವಾಸ್ ಸೇರಿದಂತೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಗಣ್ಯರು, ಸರ್ಕಾರಿ ಅಧಿಕಾರಿ/ನೌಕರರು, ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಅಂದು ಸಂಜೆ 4.30ರಿಂದ ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.

Leave a Reply

Your email address will not be published. Required fields are marked *