ತುಮಕೂರು : ಕಳೆದ 45 ವರ್ಷಗಳಿಂದ ದೇಶದ ಯುವಸಮೂಹದಲ್ಲಿ ಭಾರತೀಯ ಪ್ರಾಚೀನ ಸಂಸ್ಕೃತಿ ಮತ್ತು ಏಕಾಗ್ರತೆ ಕಲೆಗಳ ಬಗ್ಗೆ ಅರಿವು ಹೆಚ್ಚಿಸುವ ನಿಟ್ಟಿನಲ್ಲಿ ಹಲವಾರು ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಸೇವೆ ಸಲ್ಲಿಸಲಾಗುತ್ತಿದೆ ಎಂದು SPIC MACAYನ ಸಂಸ್ಥಾಪಕ, ಐಐಟಿಯ ಮಾಜಿ ಪ್ರಾಧ್ಯಾಪಕ ಮತ್ತು ಸೊಸೈಟಿ ಫಾರ್ ದಿ ಪ್ರಮೋಷನ್ ಆಫ್ ಇಂಡಿಯನ್ ಶಾಸ್ತ್ರೀಯ ಸಂಗೀತದ ಸಂಸ್ಥಾಪಕ ಪದ್ಮಶ್ರೀ ಪುರಸ್ಕøತ ಡಾ: ಕಿರಣ್ ಸೇಠ್ ಹೇಳಿದರು.
ಮನುಷ್ಯನ ಉತ್ತಮ ಆರೋಗ್ಯ ಮತ್ತು ಮಹಾತ್ಮ ಗಾಂಧಿಯವರ ತತ್ವಗಳನ್ನು ಪ್ರಚುರಪಡಿಸುವ ನಿಟ್ಟಿನಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಅವರ 145 ದಿನಗಳ ಸೈಕಲ್ ಯಾತ್ರೆ ಕೈಗೊಂಡಿರುವ ಇವರು ಇಂದು ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಎಂಪ್ರೆಸ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಸ್ವಾಗತ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಭಾರತೀಯ ಕಲೆಗಳನ್ನು ಅಭ್ಯಸಿಸುವುದರ ಮೂಲಕ ವಿಧ್ಯಾರ್ಥಿಗಳು ತಮ್ಮ ಏಕಾಗ್ರತೆಯನ್ನು ವೃದ್ಧಿಸಿಕೊಳ್ಳಬಹುದು. ಸ್ವಯಂ ಸೇವಕರಿಂದ ನಡೆಯುವ SPIC MACAY ಸಂಸ್ಥೆಯು ರಾಷ್ಟ್ರದ ಹಿತಕ್ಕಾಗಿ ನಿಸ್ವಾರ್ಥ ಸೇವೆಯನ್ನು ಮಾಡುತ್ತಿದ್ದು, ಆ ಮೂಲಕ ದೇಶ ವಿದೇಶಗಳಲ್ಲಿ ಲಕ್ಷಾಂತರ ಯುವಕರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರುವಲ್ಲಿ ಯಶಸ್ವಿಯಾಗಿದೆ ಎಂದರು.
ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಡಾ: ಸೇಠ್, ವಿಶೇಷವಾಗಿ ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೌಶಲ್ಯವನ್ನು ರೂಢಿಸಿಕೊಳ್ಳವ ರೀತಿಯ ಬಗ್ಗೆ ತಿಳಿಸಿಕೊಟ್ಟರು. ಪಾಶ್ಚಿಮಾತ್ಯ ಮತ್ತು ಭಾರತೀಯ ಪರಿಕಲ್ಪನೆಯಲ್ಲಿ ಯೋಗವು ಆರೋಗ್ಯಕರ ಬೆಳವಣಿಗೆಗೆ ಮುಖ್ಯವಾಗಿದೆ ಎಂದು ಒತ್ತಿ ಹೇಳಿದರು. ಪ್ರಸ್ತುತ ಜಗತ್ತಿಗೆ ಭಾರತೀಯ ಶಾಸ್ತ್ರೀಯ ಸಂಗೀತದ ಪ್ರಸ್ತುತತೆಯ ಅವಶ್ಯಕತೆ ಹೆಚ್ಚಿದೆ. ಶಾಸ್ತ್ರೀಯ ಸಂಗೀತವು ಮನಸ್ಸನ್ನು ಪ್ರಶಾಂತವಾಗಿಸುತ್ತದೆ. ಧ್ಯಾನ ಮತ್ತು ಯೋಗದಿಂದ ಆರೋಗ್ಯ ಹಾಗೂ ಏಕಾಗ್ರತೆಯು ಹೆಚ್ಚುತ್ತದೆ. ಇದು ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಪೂರಕವಾಗಿದೆ ಎಂದರು ಹಾಗೂ ಜೀವನದಲ್ಲಿ ಸೈಕಲ್ ಸವಾರಿಯ ಮಹತ್ವವನ್ನು ವಿವರಿಸಿದರು.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮಾತನಾಡಿ, SPIC MACAY ಯೊಂದಿಗೆ ಸಹವರ್ತಿಸಲು ಮತ್ತು ಜೊತೆಗೂಡಲು ಕರ್ನಾಟಕದ ಸ್ವಯಂ ಸೇವಕ(ಮೊ.ಸಂ.9483537697, 9141219269, 6362093267)ರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.