ತುಮಕೂರು: 12ನೆಯ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಸಾಂಸ್ಕøತಿಕ ಚಳುವಳಿಯಿಂದಾಗಿ ವರ್ಗ, ವರ್ಣ, ಲಿಂಗಭೇದಗಳಿಲ್ಲದ ಸರ್ವಸಮಾನತೆಯ ಸಮಾಜವನ್ನು ಕಟ್ಟಲು ಸಾಧ್ಯವಾಯಿತು ಎಂದು ವಿವಿ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತಿಳಿಸಿದರು.
ತುಮಕೂರು ವಿವಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಗಜ್ಯೋತಿ ಬಸವೇಶ್ವರ ಜಯಂತಿಯಲ್ಲಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಸಮಾಜದ ವಿವಿಧ ಶೋಷಿತ ಸಮುದಾಯಗಳನ್ನು ಒಗ್ಗೂಡಿಸಿ, ಸರ್ವಸಮಾನತೆಯ ಶರಣಧರ್ಮವನ್ನು ಸ್ಥಾಪಿಸಿದ್ದು ಬಸವಣ್ಣನವರು. ಸಮಾನತೆಯ ಹರಿಕಾರ ಬಸವಣ್ಣನವರ ಆದರ್ಶಗಳನ್ನು ಮೈಗೂಡಿಸಿಕೊಂಡು ಬಾಳಬೇಕು ಎಂದರು.
ಕದಳಿ ಮಹಿಳಾ ವೇದಿಕೆಯ ನಾಗರತ್ನ ಮತ್ತು ತಂಡದವರಿಂದ ಬಸವಣ್ಣನವರ ಆಯ್ದ ವಚನಗಳ ಗಾಯನ ನಡೆಯಿತು.
ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್ ಕೆ., ಹಣಕಾಸು ಅಧಿಕಾರಿ ಪ್ರೊ. ಪರಮಶಿವಯ್ಯ ಪಿ., ಕಲಾ ನಿಕಾಯದ ಡೀನ್ ಪ್ರೊ. ಕೊಟ್ರೇಶ್ ಎಂ., ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ. ಜಯಶೀಲ, ಶ್ರೀ ಬಸವೇಶ್ವರ ಅಧ್ಯಯನ ಪೀಠದ ಸಂಯೋಜಕ ಡಾ. ವೆಂಕಟರೆಡ್ಡಿ ರಾಮರೆಡ್ಡಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಸಂಯೋಜಕ ಡಾ. ಎ. ಎಂ. ಮಂಜುನಾಥ, ವಿವಿಯ ಬೋಧಕ-ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.