ತುಮಕೂರು: ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ತುಮಕೂರಿನ ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಕ್ಷಯ ರೋಗ ನಿಯಂತ್ರಣ ಕೇಂದ್ರವು ಇತ್ತೀಚೆಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯವನ್ನು “ಉತ್ತಮ ರೆಡ್ ರಿಬ್ಬನ್ ಕಾಲೇಜು” ಎಂದು ಗುರುತಿಸಿ ಸನ್ಮಾನಿಸಿದೆ.
ಹೆಚ್‍ಐವಿ/ಏಡ್ಸ್ ಕುರಿತು ಜಾಗೃತಿ ಮೂಡಿಸುವುದರಲ್ಲಿ ಹಾಗೂ ರಕ್ತದಾನ ಶಿಬಿರಗಳನ್ನು ಆಯೋಜಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿರುವ ಹಿನ್ನೆಲೆಯಲ್ಲಿ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯವನ್ನು ಗುರುತಿಸಿ ಸನ್ಮಾನಿಸಲಾಯಿತು.
ಶ್ರೀ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನ ಪರವಾಗಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಎನ್‍ಎಸ್‍ಎಸ್ ಸಂಯೋಜನಾಧಿಕಾರಿ ಜೀವಿತ್ ಎಸ್. ಹೆಚ್ ಗೌರವವನ್ನು ಸ್ವೀಕರಿಸಿದರು. ಕಾಲೇಜಿನ ಸಾಧನೆಗೆ ಪ್ರಾಂಶುಪಾಲರಾದ ಡಾ. ಎಂ.ಎಸ್ ರವಿಪ್ರಕಾಶರವರು ಎನ್‍ಎಸ್‍ಎಸ್ ತಂಡವನ್ನು ಅಭಿನಂದಿಸಿದ್ದಾರೆ.