ತುಮಕೂರು: ಆಂಧ್ರಪ್ರದೇಶದ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಅಟಲ್ ಇನ್‍ಕ್ಯೂಬೇಶನ್ ಕೇಂದ್ರವು ನೀಡುವ ‘ಬೆಸ್ಟ್ ಸ್ಟಾರ್ಟಪ್ ಇಕೋಸಿಸ್ಟಮ್’ ಪ್ರಶಸ್ತಿಗೆ ತುಮಕೂರು ವಿಶ್ವವಿದ್ಯಾನಿಲಯವು ಭಾಜನವಾಗಿದೆ. ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಅಟಲ್ ಇನ್ನೋವೇಶನ್ ಮಿಷನ್ ಸಿಇಒ ರಮಣನ್ ರಾಮನಾಥನ್ ಪ್ರಶಸ್ತಿ ಪ್ರದಾನ ಮಾಡಿದರು. ವಿವಿ ಕುಲಸಚಿವೆ ನಾಹಿದಾ ಜûಮ್ ಜûಮ್ ವಿಶ್ವವಿದ್ಯಾನಿಲಯದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.
ಕರ್ನಾಟಕದ ವಿವಿಧ ರಂಗಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರಿಗೆ ನೀಡುವ ರಾಜ್ಯಮಟ್ಟದ ‘ಮಹಿಳಾ ರತ್ನ’ ಪ್ರಶಸ್ತಿಯನ್ನು ತುಮಕೂರು ವಿವಿ ಕುಲಸಚಿವೆ ನಾಹಿದಾ ಜûಮ್ ಜûಮ್ ಅವರಿಗೆ ನೀಡಿ ಗೌರವಿಸಲಾಗಿದೆ. ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
ಜಿಲ್ಲೆಯ ಪ್ರಮುಖ ಎರಡು ತಾಲೂಕಿನ ತಹಸೀಲ್ದಾರ್ ಹಾಗೂ ವಿವಿಯ ರಿಜಿಸ್ಟ್ರಾರ್ ಹುದ್ದೆಯಲ್ಲಿನ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಇವರು ಜನಸ್ನೇಹಿ ಅಧಿಕಾರಿ ಎಂದೇ ಪ್ರಖ್ಯಾತಿ ಹೊಂದಿದ್ದಾರೆ.
ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ವಿವಿಗೆ ಲಭಿಸಿರುವ ಪ್ರಶಸ್ತಿಗೆ ಸಂತಸ ವ್ಯಕ್ತಪಡಿಸಿದರು ಹಾಗೂ ‘ಮಹಿಳಾ ರತ್ನ’ ಪ್ರಶಸ್ತಿಗೆ ಭಾಜನರಾಗಿರುವ ಕುಲಸಚಿವೆ ನಾಹಿದಾ ಜûಮ್ ಜûಮ್ ಅವರಿಗೆ ಅಭಿನಂದನೆ ತಿಳಿಸಿದರು. ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ಕೆ. ಪ್ರಸನ್ನಕುಮಾರ್ ಇದ್ದರು.