ಕ್ರೀಡೆಯಿಂದ ಉತ್ತಮ ದೈಹಿಕ-ಮಾನಸಿಕ ಸದೃಢತೆ-ಡಾ. ಜಿ. ಪರಮೇಶ್ವರ್

ತುಮಕೂರು- ಕ್ರೀಡೆ ನಮ್ಮಲ್ಲಿರುವ ಸ್ಪರ್ಧಾತ್ಮಕ ಗುಣವನ್ನು ಹೆಚ್ಚಿಸುತ್ತದೆ. ಕ್ರೀಡೆಯಿಂದ ಉತ್ತಮ ದೈಹಿಕ ಮತ್ತು ಮಾನಸಿಕ ಸದೃಢತೆ ಸಾಧ್ಯವಾಗುತ್ತದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರಪಾಲಿಕೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡೆ ಮನುಷ್ಯನ ಆರೋಗ್ಯಕ್ಕೆ ಉತ್ತಮ ಸಾಧನ. ಹಾಗಾಗಿ ಸದಾ ಒತ್ತಡದ ಕಾರ್ಯನಿರ್ವಹಿಸುವ ಪತ್ರಕರ್ತರು ದೈಹಿಕ ಮತ್ತು ಮಾನಸಿಕ ನೆಮ್ಮದಿಗಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅವಶ್ಯಕ ಎಂದರು.

ಲೇಖನಿ ಮೂಲಕ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಕೆಲಸ ಮಾಡುತ್ತಿರುವ ಪತ್ರಕರ್ತರು ಉತ್ತಮ ಬರವಣಿಗೆ ಮುಖೇನ ಸಮಾಜದ ಮೇಲೆ ಪರಿಣಾಮ ಬೀರುವ ಅವಲೋಕನದಲ್ಲಿರಬೇಕು ಎಂದು ಸಲಹೆ ಮಾಡಿದರು.

ನಮ್ಮ ಜಿಲ್ಲೆಗೆ ರಾಜ್ಯಮಟ್ಟದ ಕ್ರೀಡಾಕೂಟ ಆಯೋಜನೆಯ ಜವಾಬ್ದಾರಿಯನ್ನು ಕೊಟ್ಟಿದ್ದು, ಈ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಪತ್ರಕರ್ತರು ಆಗಮಿಸಿ ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.

ತುಮಕೂರಿನಲ್ಲಿ 58 ಕೋಟಿ ರೂ.ಖರ್ಚು ಮಾಡಿ ಸುಸಜ್ಜಿತವಾಗಿ ಕ್ರೀಡಾಂಗಣ ನಿರ್ಮಿಸಲಾಗಿದೆ. ಅಥ್ಲೆಟಿಕ್, ಕಬ್ಬಡ್ಡಿ, ಖೋಖೋ ಸೇರಿದಂತೆ ಮುಂತಾದ ಕ್ರೀಡೆಗಳನ್ನು ಜಿಲ್ಲೆಯ ಕ್ರೀಡಾಪಟುಗಳು ಪ್ರತಿನಿಧಿಸುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಕ್ರೀಡೆಗೆ ಪೆÇ್ರೀತ್ಸಾಹ ಕಡಿಮೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ಕ್ರೀಡೆಗಳನ್ನು ಪೆÇ್ರೀತ್ಸಾಹಿಸುವ ಕೆಲಸ ಆಗಬೇಕಾಗಿದೆ ಎಂದರು.

ರಾಜ್ಯಮಟ್ಟದಲ್ಲಿ ಕ್ರೀಡಾಕೂಟ ಯಶಸ್ವಿಯಾಗಲಿ ನಡೆಯಲಿ ಎಂದು ಆಶಿಸಿದ ಅವರು, ಜನವರಿಯಲ್ಲಿ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಆಯೋಜಿಸಲಾಗುತ್ತಿದೆ. ಎಲ್ಲರೂ ಒಗ್ಗೂಡಿ ಸಮ್ಮೇಳನವನ್ನು ಯಶಸ್ವಿಗೊಳಿಸಲು ಶ್ರಮ ವಹಿಸೋಣ ಎಂದರು.

ಪತ್ರಕರ್ತರಿಗೆ ಬರವಣಿಗೆ ಮೂಲಕ ಸಮಾಜವನ್ನು ಹಾಗೂ ಅನೇಕ ವಿಚಾರಗಳನ್ನು ಬದಲಾಯಿಸುವ ಶಕ್ತಿ ಇದೆ. ಜತೆಗೆ ಪತ್ರಿಕೆಗಳಲ್ಲಿ ಪ್ರಕಟವಾಗುವ ಲೇಖನಗಳಿಂದ ಸರ್ಕಾರಕ್ಕೆ ಕಿವಿ ಹಿಂಡುವ, ಸಲಹೆ, ಸೂಚನೆ ನೀಡುವ ಕೆಲಸವೂ ಆಗುತ್ತದೆ. ಈ ನಿಟ್ಟಿನಲ್ಲಿ ಪತ್ರಕರ್ತರು ಉತ್ತಮ ಲೇಖನಗಳು ಬರೆಯಲು ಮುಂದಾಗಬೇಕು ಎಂದರು.

ಡಿ. 2 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರಿಗೆ ಆಗಮಿಸುತ್ತಿದ್ದಾರೆ. 1500 ಕೋಟಿ ರೂ. ಕಾಮಗಾರಿಗಳ ಉದ್ಘಾಟನೆ, 1.46 ಸಾವಿರ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಗುವುದು. 41 ಎಕರೆ ಜಾಗದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲಾಗುವುದು. ಇದಕ್ಕೆ ಮುಖ್ಯಮಂತ್ರಿಯವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಐಪಿಎಲ್, ರಣಜಿ ಟ್ರೋಫಿ ಮುಂತಾದ ಕ್ರೀಡೆಗಳು ನಡೆಯಲಿವೆ ಎಂದರು.

ಎರಡು ವರ್ಷದೊಳಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವನ್ನು ಪೂರ್ಣಗೊಳಿಸಲು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಸಿದ್ಧವಾಗಿದೆ ಎಂದು ಅವರು ತಿಳಿಸಿದರು.
ಕೆಯುಡಬ್ಲ್ಯೂಜೆ ಅಧ್ಯಕ್ಷರಾದ ಶಿವಾನಂದ ತಗಡೂರು ಮಾತನಾಡಿ, ಅಖಿಲ ರಾಷ್ಟ್ರೀಯ ಮಟ್ಟದ ಸಾಹಿತ್ಯ ಸಮ್ಮೇಳನದಂತೆ ಮುಂದಿನ ದಿನಗಳಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನವನ್ನು ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನವಾಗಿ ಆಚರಿಸಲಾಗುವುದು ಎಂದರು.

ರಾಜ್ಯಮಟ್ಟದ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ತುಮಕೂರು ಜಿಲ್ಲಾ ಸಂಘದ ಎಲ್ಲ ಪದಾಧಿಕಾರಿಗಳು ಶ್ರಮ ವಹಿಸಿದ್ದಾರೆ ಎಂದು ಅವರು ಹೇಳಿದರು.

ಜನವರಿಯಲ್ಲಿ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ನಡೆಯಲಿದ್ದು, ಈ ಸಮ್ಮೇಳನಕ್ಕೆ ರಾಜ್ಯಾದ್ಯಂತ ಸುಮಾರು 5 ಸಾವಿರಕ್ಕೂ ಹೆಚ್ಚು ಪತ್ರಕರ್ತರು ಆಗಮಿಸಲಿದ್ದಾರೆ. ಹಾಗಾಗಿ ಸಮ್ಮೇಳನ ಯಶಸ್ವಿಗೆ ಜಿಲ್ಲಾಡಳಿತ ಹೆಚ್ಚಿನ ಸಹಕಾರ ನೀಡುವಂತೆ ಅವರು ಮನವಿ ಮಾಡಿದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಕೆಯುಡಬ್ಲ್ಯೂಜೆ ಜಿಲ್ಲಾ ಘಟಕದ ಚಿ.ನಿ. ಪುರುಷೋತ್ತಮ್, ಹಲವು ವೈಶಿಷ್ಟ್ಯಗಳನ್ನು ಹೊಂದಿರುವ ಕಲ್ಪತರುನಾಡು ತುಮಕೂರಿನಲ್ಲಿ ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ ನಡೆದಿದ್ದು, ಗೃಹ ಸಚಿವರು ಹಾಗೂ ಜಿಲ್ಲಾಡಳಿತದಿಂದ ಉತ್ತಮ ಸಹಕಾರ ದೊರೆತಿದೆ ಎಂದರು.

ಜನವರಿಯಲ್ಲಿ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ನಡೆಯಲಿದ್ದು, ಈ ಸಮ್ಮೇಳನಕ್ಕೆ ಸುಮಾರು 5 ಸಾವಿರಕ್ಕೂ ಅಧಿಕ ಪತ್ರಕರ್ತರು ಆಗಮಿಸುವ ನಿರೀಕ್ಷೆ ಇದ್ದು, ಸಮ್ಮೇಳನ ಯಶಸ್ವಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಹೆಚ್ಚಿನ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಾಸಕ ಜ್ಯೋತಿಗಣೇಶ್, ಚಿದಾನಂದ ಗೌಡ, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ.,

ತುಮಕೂರು ವಿವಿ ಕುಲಪತಿ ಪೆÇ್ರ. ವೆಂಕಟೇಶ್ವರಲು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ. ತಿಪ್ಪೇಸ್ವಾಮಿ, ಐಎಫ್‍ಡಬ್ಲ್ಯೂಜೆ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್, ಜಿಲ್ಲಾ ಘಟಕದ ಅಧ್ಯಕ್ಷ ಚಿ.ನಿ. ಪುರುಷೋತ್ತಮ್, ಪ್ರಧಾನ ಕಾರ್ಯದರ್ಶಿ ಟಿ.ಇ. ರಘುರಾಮ್, ಪ್ರಚಾರ ಸಮಿತಿಯ ರಂಗರಾಜು, ಹಿರಿಯ ಪತ್ರಕರ್ತರಾದ ಎಸ್. ನಾಗಣ್ಣ, ಟಿ.ಎನ್. ಮಧುಕರ್, ಶಾಂತರಾಜು, ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಮತ್ತಿತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *