ತುಮಕೂರು : ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯ ಸೀಬಿ ಫಾರೆಸ್ಟ್ ಬಳಿ ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರಿ ದಂಪತಿಗಳಾದ ಶ್ರೀಹರ್ಷ(55), ಚಂದ್ರಕಲಾ (50) ಅವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಮೃತರು ತುಮಕೂರಿನ ಅಶೋಕನಗರದ ನಿವಾಸಿಗಳಾದ ಇವರು, ನಿವೃತ್ತ ಪ್ರಾಂಶುಪಾಲರಾದ ಜಿ.ಎಂ.ಶ್ರೀನಿವಾಸಯ್ಯನವರ ಮಗ ಮತ್ತು ಸೋಸೆಯಾಗಿದ್ದು, ಇಂದು ಬೆಳಿಗ್ಗೆ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಿಂದ ಹೊರಟಿದ್ದಾರೆ.
ಸುಮಾರು ಮಧ್ಯಾಹ್ನ 12.15ರ ಸಮಯದಲ್ಲಿ ಸೀಬಿ ಫಾರೆಸ್ಟ್ ಬಳಿ ಹಿಂದಿನಿಂದ ಬರುತ್ತಿದ್ದ ಕೇರಳದ ಕಾರು ಬೈಕ್‍ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳಿಬ್ಬರು ಸ್ಥಳದಲ್ಲೇ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ.
ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ವಾಪಸ್ಸು ಬರುವಾಗ ಬೈಕ್‍ನ್ನು ತಿರುಗಿಸಿಕೊಳ್ಳುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಕೇರಳ ಮೂಲದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಅಫಘಾತ ಸಂಭವಿಸಿದೆ.
ನಂತರ ಮೃತ ದೇಹಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ರವಾನಿಸಿ, ಮರಣೋತರ ಪರೀಕ್ಷೆ ಮಾಡಿ, ಸಂಬಂಧಿಕರಿಗೆ ದೇಹಗಳನ್ನು ಹಸ್ತಾಂತರಿಸಲಾಗಿದೆ.
ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.
ವಿಷಯ ತಿಳಿದ ಕೂಡಲೇ ಚಿಂತಕ ಕೆ. ದೊರೈರಾಜ್, ಸಾಹಿತಿ ಜಿ.ವಿ.ಆನಂದಮೂರ್ತಿ, ವಕೀಲರಾದ ಮಾರುತಿಪ್ರಸಾದ್, ಹೆಚ್.ವಿ.ಮಂಜುನಾಥ, ಡಾ||ಹೆಚ್.ವಿ.ರಂಗಸ್ವಾಮಿ, ನಿವೃತ್ತ ಇಂಜಿನಿಯರ್ ರಾಮಚಂದ್ರಪ್ಪ, ನಿವೃತ್ತ ಬ್ಯಾಂಕ್ ಅಧಿಕಾರಿ ನಾಗರಾಜಶೆಟ್ಟಿ ಮುಂತಾದವರು ಜಿ.ಎಂ.ಶ್ರೀನಿವಾಸಯ್ಯ, ಅವರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದರು.
ಮೇ 7ರ ಭಾನುವಾರ ಮಧ್ಯಾಹ್ನ 12ಗಂಟೆಗೆ ಚಿಕ್ಕಪೇಟೆ ಗಾರ್ಡನ್ ರಸ್ತೆಯ ಚಿತಗಾರದಲ್ಲಿ ಅಚಿತಿಮ ಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.