ನವದೆಹಲಿ: ಬಿಜೆಪಿಯ ವಿಧಾನಸಭೆ ಚುನಾವಣೆ ಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕೆಲವೆ ಗಂಟೆಗಳಲ್ಲಿ ಬಿಡುಗಡೆಯಾಗಲಿದೆ.
ತುಮಕೂರು ನಗರ ಕ್ಷೇತ್ರಕ್ಕೆ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ ಎನ್ನಲಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನೇತೃತ್ವದಲ್ಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆದಿದೆ. ಮಹತ್ವದ ಸಭೆಯಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಬಗ್ಗೆ ಅಂತಿಮ ಹಂತದ ಚರ್ಚೆ ನಡೆಸಲಾಗಿದೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿ ಅಂತಿಮ ಹಂತದ ಸಿದ್ಧತೆಯಲ್ಲಿದ್ದು, ನಾಳೆಯೊಳಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುವ ಸಾಧ್ಯತೆ ಇದೆ. ಕೆಲ ಎಂಎಲ್ಸಿ ಮತ್ತು ಸಂಸದರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಈ ಬಗ್ಗೆ ಇಂದಿನ ಸಭೆಯಲ್ಲಿ ಪ್ರಸ್ತಾಪ ಮಾಡಲಾಗುವುದು. ಸಭೆಯ ಬಳಿಕ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಿಎಂ ಬೊಮ್ಮಾಯಿ ನಿನ್ನೆ ಹೇಳಿದ್ದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಮನ್ಸುಖ್ ಮಾಂಡವಿಯ ಸೇರಿದಂತೆ ಇತರ ರಾಜಕೀಯ ನಾಯಕರು ಉಪಸ್ಥಿತರಿದ್ದರು.
ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ಗಾಗಿ ಪೈಪೋಟಿ ಇರುವುದು ನಿಜ. ಈಗಾಗಲೇ ಕೆಲವು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್ಗೆ ಕಳುಹಿಸಿದ್ದೇವೆ. ಯಾರು ಗೆಲ್ಲುತ್ತಾರೆ ಎನ್ನುವುದರ ಬಗ್ಗೆ ಚರ್ಚಿಸಿ ಪಟ್ಟಿ ಬಿಡುಗಡೆ ಮಾಡುತ್ತೇವೆ. ಈ ಬಾರಿ ಸ್ಪಷ್ಟ ಬಹುಮತ ಬರುವುದು ಖಚಿತ ಎಂದು ಬಿಎಸ್ವೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹಾಲಿ ಶಾಸಕರುಗಳಿಗೂ ಟಿಕೆಟ್ ತಪ್ಪುವ ಸಂಭವವಿದೆ ಎಂದು ಹೇಳಲಾಗುತ್ತಿದೆ.