ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಅವರು ಬಿಜೆಪಿ, ಜೆಡಿಎಸ್ ಮುಖಂಡರ ಜೊತೆಗೂಡಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ಸೋಮವಾರ ನಾಮಪತ್ರ ಸಲ್ಲಿಸಿದರು.ಬಿಜೆಪಿ ಶಾಸಕ ಸುರೇಶ್ಗೌಡ, ಚಿಕ್ಕನಾಯಕನಹಳ್ಳಿಯ ಜೆಡಿಎಸ್ ಶಾಸಕ ಸುರೇಶ್ಬಾಬು, ಮಾಜಿ ಶಾಸಕ ಜೆಡಿಎಸ್ನ ಸುಧಾಕರಲಾಲ್, ಬಿಜೆಪಿ ಮುಖಂಡ ಅನಿಲ್ಕುಮಾರ್ ಅವರು ನಾಮಪತ್ರ ಸಲ್ಲಿಕೆ ವೇಳೆ ವಿ.ಸೋಮಣ್ಣ ಅವರ ಜೊತೆಗಿದ್ದರು.
ಇದಕ್ಕೂ ಮೊದಲು ವಿ.ಸೋಮಣ್ಣನವರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ತಮ್ಮ ಆರಾಧ್ಯದೈವ ಡಾ.ಶಿವಕುಮಾರಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು, ಶ್ರೀಮಠದ ಸಿದ್ಧಲಿಂಗಸ್ವಾಮೀಜಿಗಳ ಆಶೀರ್ವಾದ ಪಡೆದರು. ಮಠದಲ್ಲಿ ನಡೆದ ಡಾ.ಶಿವಕುಮಾರಸ್ವಾಮೀಜಿಗಳ ಜನ್ಮದಿನ ಸಮಾರಂಭದಲ್ಲಿ ಭಾಗಿಯಾಗಿ ಶ್ರೀಗಳಿಗೆ ಭಕ್ತಿ ನಮನ ಸಲ್ಲಿಸಿದರು.
ನಂತರ ನಗರದ ಬಿ.ಹೆಚ್.ರಸ್ತೆಯ ವಿನಾಯಕನಗರದ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು.
ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ಗ್ರಾಮಾಂತ ಕ್ಷೇತ್ರ ಶಾಸಕ ಸುರೇಶ್ಗೌಡ, ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ನ ಹಲವು ಮುಖಂಡರು ಸೋಮಣ್ಣರ ಜೊತೆಗಿದ್ದರು.