ತುಮಕೂರು : ತುಮಕೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ನಡೆದ ಉಂಡೆ ಕೊಬ್ಬರಿ ಖರೀದಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದ ವೇಳೆ ಬಿಜೆಪಿ ಕಾರ್ಯಕರ್ತರು ಪಕ್ಷದ ಬಾವುಟ ಪ್ರದರ್ಶಿಸಿದರು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಂತ್ರಿಗಳ ಮುಂದೆಯೇ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆಯಿತು.
ಕೇಂದ್ರ ರಾಜ್ಯ ಕೃಷಿ ಸಚಿವೆ ಶೋಭಾ ಕರಂದಾಜ್ಲೆ ಮತ್ತು ರಾಜ್ಯ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನ ಎಪಿಎಂಸಿ ಆವರಣದಲ್ಲಿ ಉಂಡೆ ಗೊಬ್ಬರಿ ಖರೀದಿ ಕೇಂದ್ರ ಉದ್ಘಾಟನಾ ಸಮಾರಂಭಕ್ಕೆ ಬಂದಿದ್ದಾಗ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಸಹ ಆಗಮಿಸಿದ್ದರು.
ಬಿಜಿಪಿ ಕಾರ್ಯಕರ್ತರು ಕೇಸರಿ ಶಾಲು ಹಾಕಿಕೊಂಡು ಬಂದಿರುವುದಕ್ಕೆ ಸರ್ಕಾರಿ ಕಾರ್ಯಕ್ರಮಕ್ಕೆ ಕೇಸರಿ ಶಾಲು ಹಾಕಿಕೊಂಡು ಬರಬಾರದು ಎಂದು ತಗಾದೆ ತೆಗೆದರು, ಇದರಿಂದ ಎರಡೂ ಪಕ್ಷಗಳ ಕಾರ್ಯಕರ್ತರು ವಾಗ್ವಾದಕ್ಕೆ ಇಳಿದರು, ಇದರಿಂದ ಕಾರ್ಯಕ್ರಮಕ್ಕೆ ಬಂದಿದ್ದ ರೈತರಿಗೆ ಒಂದು ತರಹದ ಮುಜುಗರವುಂಟಾಯಿತು.
ಮಧ್ಯ ಪ್ರವೇಶಿಸಿದ ಪೊಲೀಸರು ಎರಡೂ ಕಡೆಯ ಕಾರ್ಯಕರ್ತರನ್ನು ಸಮಾದಾನಗೊಳಿಸಿ ಕಳಿಸಿದರು.