ತುಮಕೂರು: ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಅವರ ತಂದೆ, ಹೆಚ್.ಎನ್.ಎಸ್. ಸಂಸ್ಥೆ ಮಾಲೀಕರೂ ಆದ ಹೆಚ್.ಎನ್.ಶಿವಲಿಂಗಪ್ಪನವರು ಗುರುವಾರ ಮುಂಜಾನೆ ನಿಧನರಾದರು. ಇವರಿಗೆ 94 ವರ್ಷ ವಯಸ್ಸಾಗಿತ್ತು.
ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ಮೃತರ ಸ್ವಗ್ರಾಮ ತುಮಕೂರು ತಾಲ್ಲೂಕಿನ ಹೆಬ್ಬಾಕದ ಅವರ ಜಮೀನಿನಲ್ಲಿ ಗುರುವಾರ ಮಧ್ಯಾಹ್ನ ಅಂತ್ಯಸಂಸ್ಕಾರ ನೆರವೇರಿತು.
ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‍ಗೌಡರು ಸೇರಿದಂತೆ ಹಲವಾರು ಮುಖಂಡರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.