
ತುಮಕೂರು : ತುಮಕೂರು ಜಲ್ಲೆಯಲ್ಲಿ ಬಿಜೆಪಿಯು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ಹೇಳಿದರು.
ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದವರು, ಜಿಲ್ಲೆಯಲ್ಲಿ ಶಾಂತಿಯುತ ಮತದಾನವಾಗಿದ್ದು, ನಾನು ಅಧ್ಯಕ್ಷನಾಗಿರುವ ತುಮಕೂರು ವ್ಯಾಪ್ತಿಯ 7 ವಿಧಾನ ಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ, ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ನಮಗೆ ಯಾವುದೇ ಕ್ಷೇತ್ರದಲ್ಲಿ ಬಂಡಾಯದ ಬಿಸಿ ತಟ್ಟಿಲ್ಲ, ತುಮಕೂರು ನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಜಿ.ಬಿ.ಜ್ಯೋತಿಗಣೇಶ್ ಜಯಗಳಿಸಲಿದ್ದಾರೆ ಎಂದು ತಿಳಿಸಿದರು.