ತುಮಕೂರು : ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅರುಣೋದಯ ಶೈಕ್ಷಣಿಕ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಮತ್ತು ಶ್ರೀ ಗುರುಸಿದ್ಧರಾಮೇಶ್ವರ ಸಾಹಿತ್ಯ ಸಂಪದ ಸಹಯೋಗದೊಂದಿಗೆ ಆಗಸ್ಟ್ 27ನೇ ಶನಿವಾರ ಬೆಳಿಗ್ಗೆ 10.30ಕ್ಕೆ ಅಮಾನಿಕೆರೆ ಮುಂಭಾಗದ ಕನ್ನಡ ಭವನದಲ್ಲಿ ಡಾ.ದಿನೇಶ್ ಕುಮಾರ್.ಪಿ.ಎನ್. ಅವರ “ಹೊಸದುರ್ಗ ಪ್ರದೇಶದ ಪಾಳೇಯಗಾರರು” ಕೃತಿ ಲೋಕಾರ್ಪಣೆಗೊಳ್ಳಲಿದೆ.
ಕಾರ್ಯಕ್ರಮವನ್ನು ರಾಜ್ಯಸಭಾ ಸದಸ್ಯರಾದ ಡಾ.ಎಲ್.ಹನುಮಂತಯ್ಯನವರು ಉದ್ಘಾಟಿಸಲಿದ್ದು, ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಎಂ.ವೆಂಕಟೇಶ್ವರಲು ಉಪಸ್ಥಿತಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೆ.ಎಸ್.ಸಿದ್ಧಲಿಂಗಪ್ಪನವರು ಅಧ್ಯಕ್ಷತೆ ವಹಿಸಲಿದ್ದಾರೆ.
ಕೃತಿ ಲೋಕಾರ್ಪಣೆಯನ್ನು ತುಮಕೂರು ವಿಶ್ವವಿದ್ಯಾನಿಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ.ನಿರ್ಮಲ್ರಾಜ್ ಮಾಡಲಿದ್ದು, ಕೃತಿ ಕುರಿತು ಶ್ರೀ ಸಿದ್ಧಗಂಗಾ ಪದವಿ ಕಾಲೇಜುಗಳ ಸಂಯೋಜಕರಾದ ಡಾ.ಡಿ.ಎನ್.ಯೋಗೀಶ್ವರಪ್ಪ ಮತ್ತು ತುಮಕೂರು ವಿ.ವಿ.ಯ ಇತಿಹಾಸ ವಿಭಾಗದ ಪ್ರೊ.ಎಲ್.ಪಿ.ರಾಜು ಮಾತನಾಡಲ್ಲಿದ್ದಾರೆ.
ಈ ಸಂದರ್ಭದಲ್ಲಿ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಪ್ರಿಯಾ ಠಾಕೂರ್ ಅವರನ್ನು ಸನ್ಮಾನಿಸಲಿದ್ದು, ಲೇಖಕರಾದ ಡಾ.ದಿನೇಶ್ಕುಮಾರ್ ಉಪಸ್ಥಿತಿಯಿರುವರು.
ಮುಖ್ಯ ಅತಿಥಿಗಳಾಗಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಡಾ.ಸತೀಶ್ ಕುಮಾರ್ ಎಸ್.ಹೊಸಮನಿ, ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಯ ಸಹಾಯಕ ಅಭಿಯೋಗ ನಿರ್ದೇಶಕರಾದ ಜಿ.ಬಸವರಾಜು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ದೊಡ್ಡಮನೆ ಗೋಪಾಲಗೌಡರು, ಪ್ರಾಧ್ಯಾಪಕರಾದ ಡಾ.ಓ.ನಾಗರಾಜು, ಡಾ.ಶಿವನಂಜಯ್ಯ, ಆಯುರ್ವೇದ ವೈದ್ಯರಾದ ಡಾ.ಬಿ.ನಂಜುಂಡಸ್ವಾಮಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾದ ಬಸವರಾಜಪ್ಪ ಆಪಿನಕಟ್ಟೆ, ತಿಪಟೂರಿನ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎನ್.ದೊಡ್ಡಯ್ಯ, ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕøತರಾದ ಡಾ.ಲಕ್ಷ್ಮೀನಾರಾಯಣ ಅವರನ್ನು ಅಭಿನಂದಿಸಲಾಗುವುದು. ಕಾರ್ಯಕ್ರಮದ ನಿರೂಪಣೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಸಣ್ಣಹೊನ್ನಯ್ಯ ಕಂಟಲಗೆರೆ ಮಾಡುವರು.