ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯ

ತುಮಕೂರು: ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದನೆ ಹೇಳಿಕೆ ನೀಡಿ ಸಾರ್ವಜನಿಕರ ನಡುವೆ ದ್ವೇಷ ಬಿತ್ತುವ ಯತ್ನ ನಡೆಸಿದ ಸಂಘ ಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಸೋಸಿಯೇಷನ್ ಫಾರ್ ಪೆÇ್ರಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್) ಒತ್ತಾಯಿಸಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ವಿಧಿಸಲಾಗಿರುವ ಹಿಜಾಬ್ ನಿμÉೀಧವನ್ನು ಹಿಂಪಡೆಯುವ ಕುರಿತು ಹೇಳಿಕೆ ನೀಡಿ ಮೂಲಭೂತ ಹಕ್ಕನ್ನು ಎತ್ತಿ ಹಿಡಿಯುವ ಕುರಿತು ಹೇಳಿದ್ದರು. ಈ ಹೇಳಿಕೆಯನ್ನು ಉಲ್ಲೇಖಿಸಿ ಸಂಘ ಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಇಡೀ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷಕಾರುವ ಹೇಳಿಕೆ ನೀಡಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ ರಾಜ್ಯದಲ್ಲಿ ಕೋಮು ದ್ವೇಷದ ಭಾಷಣ ಮಾಡಿ ಶಾಂತಿ ಸುವ್ಯವಸ್ಥೆ ಕದಡುವ ನಿರಂತರ ಪ್ರಯತ್ನದಲ್ಲಿದ್ದು, ಈ ಮುಂಚೆಯೂ ಕೂಡ ಅವರ ಹಲವು ಭಾಷಣದಲ್ಲಿ ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ದ್ವೇಷ ಭಾಷಣ ಮಾಡಿದ್ದಾರೆ.

ಇಡೀ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿರುವ ಕಲ್ಲಡ್ಕ ಭಟ್, “ಮುಸಲ್ಮಾನ್ ಹುಡುಗರು ಅμÉ್ಟೀ ಅಲ್ಲ, ಮುಸ್ಲಿಂ ಮಹಿಳೆಯರು ಮತಾಂತರ ಮಾಡುತ್ತಿದ್ದಾರೆ. ನಿಮ್ಮ ಮುಸ್ಲಿಂ ಸಮಾಜದಲ್ಲಿ ಹುಡುಗಿಯರು ಇಲ್ಲವಾ. ಹಿಂದೂ ಹುಡುಗಿಯರನ್ನು ಯಾಕೆ ಟಾರ್ಗೆಟ್ ಮಾಡುತ್ತೀರಾ. ಮತಾಂತರ ಮಾಡಲು ಲವ್ ಜಿಹಾದ್ ಪ್ರಯತ್ನಗಳಾಗುತ್ತಿವೆ ಎಂದು ಎಚ್ಚರಿಸಿದರು. ಮುಸ್ಲಿಮರಿಗೆ ಈ ಹಿಂದೆ ತಲಾಕ್ ಹೇಳುವ ಅವಕಾಶ ಇತ್ತು. ಮೋದಿ ಸರ್ಕಾರದಿಂದ ತ್ರಿವಳಿ ತಲಾಕ್ ಇಲ್ಲದಾಗಿದೆ. ಮುಸಲ್ಮಾನ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಮೋದಿ ಸರ್ಕಾರ ಎಂದು ಹೇಳಿರುವ ಕುರಿತು ರಾಜ್ಯ ಮಾಧ್ಯಮಗಳು ವರದಿ ಮಾಡಿವೆ.

ಮುಸ್ಲಿಮರ ಸಂಖ್ಯೆ ಹೆಚ್ಚಾಗುತ್ತಿದೆ. ಈ ದೇಶವನ್ನು ಉಳಿಸಿಕೊಳ್ಳುವ ಮಹತ್ಕಾರ್ಯ ಹಿಂದೂಗಳಿಂದ ಮಾತ್ರ ಸಾಧ್ಯ. ಮುಸ್ಲಿಂರಿಗೆ ಹಲವು ದೇಶಗಳು ಇವೆ. ಆದರೆ, ಹಿಂದೂಗಳಿಗೆ ಭಾರತ ಮಾತ್ರ ಇರೋದು. ಹಿಂದೂಗಳಿಗೆ ಬೇರೆ ಕಡೆ ಜಾಗ ಇಲ್ಲ. ಅದಕ್ಕಾಗಿ ನಾವು ಹೋರಾಟ ಮಾಡಬೇಕು. ನಮ್ಮ ದೇಶವನ್ನು ಉಳಿಸಬೇಕು ಎಂದು ಹೇಳಿ ಸಾರ್ವಜನಿಕರ ನಡುವೆ ಧಾರ್ಮಿಕ ಸಂಘರ್ಷ ಹುಟ್ಟು ಹಾಕಲು ಯತ್ನ ನಡೆಸಿದ್ದಾರೆ.

ಈ ಎಲ್ಲ ಹೇಳಿಕೆಗಳಲ್ಲಿ ಆಧಾರ ರಹಿತವಾಗಿ ಕಲ್ಲಡ್ಕ ಪ್ರಭಾಕರ್ ಭಟ್ ಇಡೀ ಮುಸ್ಲಿಂ ಸಮಯದಾಯದ ವಿರುದ್ಧ ಪ್ರಮುಖವಾಗಿ ಮಹಿಳೆಯರ ವಿರುದ್ಧ ದ್ವೇಷ ಭಾಷಣ ಮಾಡುತ್ತ ಜನರಲ್ಲಿ ಆತಂಕ ಸೃಷ್ಟಿಸುವ, ಗಲಭೆ ಸೃಷ್ಟಿಸುವ ಪ್ರಯತ್ನ ನಡೆಸುತ್ತಿದ್ದು ಅವರ ವಿರುದ್ಧ ಕೂಡಲೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಅಸೋಸಿಯೇಷನ್ ಫಾರ್ ಪೆÇ್ರಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಅಧ್ಯಕ್ಷರಾದ ತಾಜುದ್ದೀನ್ ಷರೀಫ್ ಹಾಗೂ ಕಾರ್ಯದರ್ಶಿ ಗೌಸ್ ಪಾμÁ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *