ಜ.25ರಂದು ದತ್ತಿ ಕಥಾ-ಕವನ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

ತುಮಕೂರು : ಕರ್ನಾಟಕ ಲೇಖಕಿಯರ ಸಂಘ ತುಮಕೂರು ಜಿಲ್ಲಾ ಶಾಖೆಯು ಏರ್ಪಡಿಸಿದ್ದ ಶ್ರೀಮತಿ ನಾಗರತ್ನಮ್ಮ ಅ.ನಾ.ಶೆಟ್ಟಿ ದತ್ತಿ ಕಥಾ ಸ್ಪರ್ಧೆ ಮತ್ತು ಶ್ರೀಮತಿ ಲಕ್ಷ್ಮಿದೇವಮ್ಮ ಗೋವಿಂದಯ್ಯ ದತ್ತಿ ಕವನ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಜನವರಿ 25 ರಂದು ಬೆಳಗ್ಗೆ 11 ಗಂಟೆಗೆ ಅಮಾನಿಕೆರೆಯ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಲೇಸಂ ತುಮಕೂರು ಜಿಲ್ಲಾ ಶಾಖೆಯ ಕಾರ್ಯದರ್ಶಿ ಡಾ. ಶ್ವೇತಾ ರಾಣಿ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಲೇಖಕಿಯರ ಸಂಘದ ಅಧ್ಯಕ್ಷರಾದ ಡಾ.ಆರ್ .ಸುನಂದಮ್ಮ ಉದ್ಘಾಟಿಸಲಿದ್ದು, ಜಿಲ್ಲಾ ಶಾಖೆ ಅಧ್ಯಕ್ಷರಾದ ಮಲ್ಲಿಕಾ ಬಸವರಾಜುರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು.

ಮುಖ್ಯ ಅತಿಥಿಗಳಾಗಿ ಆಮೇರಿಕಾದ ಅನಿವಾಸಿ ಭಾರತೀಯ ಲೇಖಕಿ ಶಶಿಕಲಾ ಚಂದ್ರಶೇಖರ್, ತುಮಕೂರು ಕಲೇಸಂ ಜಿಲ್ಲಾ ಶಾಖೆ ಉಪಾಧ್ಯಕ್ಷರಾದ ಸಿ.ಎ. ಇಂದಿರಾ, ತುಮಕೂರು ಕಲೇಸಂ ಜಿಲ್ಲಾ ಶಾಖೆಯ .ನಿಕಟಪೂರ್ವ ಅಧ್ಯಕ್ಷರಾದ ಸಿ.ಎನ್.ಸುಗುಣಾದೇವಿ ಭಾಗವಹಿಸುವರು.

ತೀರ್ಪುಗಾರರಾದ ಬಾ.ಹ.ರಮಾಕುಮಾರಿ ಮತ್ತು ಡಾ. ಗೀತಾವಸಂತ ರವರು ಉಪಸ್ಥಿತರಿರುವರು.

ಸದರಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಸ್ಪರ್ಧಿಗಳು, ಸಂಘದ ಸದಸ್ಯರು ಮತ್ತು ಸಾಹಿತ್ಯಾಸಕ್ತರು ಆಗಮಿಸಿ
ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಲಾಗಿದೆ.

ಸರ್ವ ಸದಸ್ಯರ ಸಭೆ :

ಕವನ ಮತ್ತು ಕಥಾ ಸ್ಪರ್ಧೆಯ ಬಹುಮಾನ ವಿತರಣೆ ಸಮಾರಂಭದ ನಂತರ ಮಧ್ಯಾಹ್ನ 3.30ಕ್ಕೆ ಕನ್ನಡ ಭವನದಲ್ಲಿ ಕರ್ನಾಟಕ ಲೇಖಕಿಯರ ಸಂಘದ ತುಮಕೂರು ಜಿಲ್ಲಾ ಶಾಖೆಯ ಸರ್ವಸದಸ್ಯರ ಸಭೆಯನ್ನು ಕರೆಯಲಾಗಿದ್ದು, ಎಲ್ಲಾ ಸದಸ್ಯರು ಹಾಜರಾಗುವಂತೆ ಜಿಲ್ಲಾ ಶಾಖೆಯ ಕಾರ್ಯದರ್ಶಿ ಡಾ.ಶ್ವೇತಾರಾಣಿ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *