ತುಮಕೂರು : ಜಿಲ್ಲೆಯ ಮಧುಗಿರಿ ತಾಲ್ಲೂಕು ಮಿಡಿಗೇಶಿ ಹೋಬಳಿ ಚಿನ್ನೇನಹಳ್ಳಿ ಗ್ರಾಮದಲ್ಲಿ ವಾಂತಿ-ಭೇದಿ ಪ್ರಕರಣ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರನ್ವಯ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಮಾರಮ್ಮ ದೇವಿ ಜಾತ್ರಾ ಮಹೋತ್ಸವ, ಪೂಜಾ ಕಾರ್ಯಕ್ರಮವನ್ನು ರದ್ದುಪಡಿಸಿ ಹಾಗೂ ಯಾವುದೇ ಸಂತೆ, ಜಾತ್ರೆ ಹಾಗೂ ಸಾಮೂಹಿಕ ಕಾರ್ಯಕ್ರಮವನ್ನು ನಡೆಸದಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆದೇಶಿಸಿದ್ದಾರೆ.
ಸದರಿ ಆದೇಶವು ಪ್ರಸ್ತುತ ಸದರಿ ಗ್ರಾಮದಲ್ಲಿ ಪರಿಸ್ಥಿತಿ ಹತೋಟಿಗೆ ಬರುವವರೆಗೂ ಜಾರಿಯಲ್ಲಿರುತ್ತದೆ.