ಜಾತಿ ನಿಂದನೆ ಮಾಡಿದ ವರದಿಗಾರ ಮಂಜುನಾಥ್ ತಾಳಮಕ್ಕಿ ಗಡಿಪಾರಿಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹ

ತುಮಕೂರು : ಸಹವರ್ತಿ ಟಿವಿ ವರದಿಗಾರ ಮೇಲೆ ಹಲ್ಲೆ, ಜಾತಿ ನಿಂದನೆ ಮಾಡಿದ ಆರೋಪಿ ಮಾನಸಿಕ ಅಸ್ವತ್ತ ಮಂಜುನಾಥ್ ತಾಳಮಕ್ಕಿ ಯನ್ನು ಗಡೀಪಾರು ಮಾಡಿ, ಸೂಕ್ತಿ ಚಿಕಿತ್ಸೆ ಕೊಡಿಸಬೇಕು ಎಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಪ್ರಗತಿ ಪರ ಚಿಂತಕ ದೊರೈರಾಜು ಮಾತನಾಡಿ ಮಾಧ್ಯಮ ರಂಗದಲ್ಲಿ ಕೆಲಸ ನಿರ್ವಹಿಸುವ ದಲಿತ ಸಮುದಾಯದ ಸಮಯ ಮಂಜುನಾಥ್ ಮೇಲೆ ಮಂಜುನಾಥ್ ತಾಳಮಕ್ಕಿ ಹಲ್ಲೆ ಮತ್ತು ಜಾತಿ ನಿಂದನೆ ಮಾಡಿರುವ ಪ್ರಕರಣದಲ್ಲಿ ಪೆÇಲೀಸರು ಜಾತಿನಿಂದನೆ ಪ್ರಕರಣ ವನ್ನಷ್ಟೇ ಎಫ್‍ಐಆರ್ ನಲ್ಲಿ ನಮೂದಿಸುವ ಮೂಲಕ ಹಲ್ಲೆ ಪ್ರಕರಣವನ್ನು ಮರೆಮಾಚಿದ್ದಾರೆ, ಸದರಿಪ್ರಕರಣದಲ್ಲಿ ಹಲ್ಲೆ ಮಾಡಿರುವುದನ್ನು ಎಫ್ .ಐ.ಆರ್. ನಲ್ಲಿ ನಮೂದಿಸಲು ಜಿಲ್ಲಾ ದಂಡಾಧಿಕಾರಿಗಳು ಸಂಬಂಧ ಪಟ್ಟವರಿಗೆ ನಿರ್ದೇಶನ ನೀಡಬೇಕು, ಹಾಗೂ ಪ್ರಕರಣದಲ್ಲಿ ಹಲ್ಲೆ ಮಾಡಿರುವ ಮಂಜುನಾಥ್ ತಾಳಮಕ್ಕಿ ಮಾನಸಿಕ ಅಸ್ವಸ್ಥನಾಗಿದ್ದು, ಮಾನಸಿಕ ಅಸ್ವಸ್ಥತೆತೆಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ನ್ಯಾ ಯಾಲಯದಲ್ಲಿ ಒಪ್ಪಿಕೊಂಡಿದ್ದು, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಮಂಜುನಾಥ್ ತಾಳಮಕ್ಕಿಗೆ ನಿಮಾನ್ಸ್ ತಜ್ಞರಿಂದ ಸೂಕ್ತ ಚಿಕಿತ್ಸೆ ಕೊಡಿಸ ಬೇಕು ಎಂದು ಒತ್ತಾಯಿಸಿದರು.

ಮಾಧ್ಯಮ ವ್ಯಕ್ತಿಯಾಗಿರುವುದರಿಂದ ದಿನನಿತ್ಯ ಗಣ್ಯರನ್ನು, ಅತಿಗಣ್ಯರನ್ನು ಭೇಟಿ ಮಾಡಬೇಕಾದ ಅನಿವಾರ್ಯತೆ ಇದ್ದು, ಈ ಸಂದರ್ಭದಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡು ಗಣ್ಯರು, ಅತಿ ಗಣ್ಯರಿಗೆ ಅಪಾಯ ಉಂಟು ಮಾಡಬಹುದಾದ ಅವಕಾಶ ಹೆಚ್ಚಿರುವುದರಿಂದ ಮಂಜುನಾಥ್ ತಾಳಮಕ್ಕಿ ಅವರಿಗೆ ಸೂಕ್ತ ಚಿಕಿತ್ಸೆಗೆ ಶಿಫಾರಸ್ಸು ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಬೇಕು ಎಂದರು.

ಎಸ್ ಸಿ ಎಸ್ ಟಿ ನೌಕರರ ಸಮನ್ವಯ ಸಮಿತಿ ಮಾಜಿ ಅಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣಪ್ಪ ಮಾತನಾಡಿ ಸಮಾಜದ ಸ್ವಾಸ್ಥವನ್ನು ಕಾಪಾಡಬೇಕಾದ ಹೊಣೆಗಾರಿಕೆಯನ್ನು ಹೊತ್ತಿರುವ ಜಿಲ್ಲಾಡಳಿತ ಹಾಗೂ ಪೆÇಲೀಸ್ ಇಲಾಖೆ ಸಮಾಜದಲ್ಲಿ ಸ್ವಾಸ್ಥ್ಯವನ್ನು ಕಾಪಾ ಡಲು ಮಾನಸಿಕ ಅಸ್ವಸ್ಥರಾಗಿರುವ ಮಂಜುನಾಥ್ ತಾಳಮಕ್ಕಿ ಅಂತವರನ್ನು ಸಮಾಜದಲ್ಲಿ ಸ್ವೆಚ್ಛವಾಗಿ ಓಡಾಡಲು ಬಿಡುವುದರಿಂದ ದಲಿತ ವಿರೋಧಿ ಮನ ಸ್ಥಿತಿಯನ್ನು ಹೊಂದಿರುವ ವ್ಯಕ್ತಿಯಾಗಿರುವ ಮಂಜುನಾಥ್ ತಾಳಮಕ್ಕಿ ಇನ್ನಷ್ಟು ದಲಿತರ ಮೇಲೆ ಹಲ್ಲೆ ಮಾಡುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ ಹಾಗಾಗಿ ಮಂಜುನಾಥ್ ತಾಳಮಕ್ಕಿ ಅವರ ಮಾನಸಿಕ ಆರೋಗ್ಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಚಿಕಿತ್ಸೆಗೆ ಶಿಫಾರಸ್ಸು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಮಾನಸಿಕ ಅಸ್ವಸ್ಥ ಮಂಜುನಾಥ್ ತಾಳಮಕ್ಕಿ ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಜಿಲ್ಲಾಡಳಿತ ಕ್ರಮವಹಿಸದೇ ಹೋದಲ್ಲಿ, ಮುಂದಿನ ದಿನಗಳಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಡಳಿತದ ವಿರುದ್ಧ ನಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ತುಮಕೂರು ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊಲೆ, ದೌರ್ಜನ್ಯ, ಅಸ್ಪೃಶ್ಯತಾಚರಣೆ ದೂರುಗಳ ವಿರುದ್ಧ ಕೌಂಟರ್ ಕೇಸ್ಗಳನ್ನು ಹಾಕದಂತೆ ಕ್ರಮವಹಿಸುವ ಮೂಲಕ ದಲಿತರ ಸಂವಿಧಾನಾತ್ಮಕ ರಕ್ಷಣೆಯನ್ನು ಕಲ್ಪಿಸಬೇಕಾಗಿರುವ ಜವಾಬ್ದಾರಿ ಸರ್ಕಾರದ ಮೇಲಿದೆ. ಮಧುಗಿರಿ ತಾಲ್ಲೂಕು ಕವಣದಾಲ ಗ್ರಾಮದಲ್ಲಿ ದೇವಾಲಯ ಪ್ರವೇಶವನ್ನು ನಿಬರ್ಂಧಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲೆಯ ಎಲ್ಲ ದೇಗುಲ ಗಳಲ್ಲಿಯೂ ದಲಿತರಿಗೆ ದೇವಾಲಯಕ್ಕೆ ಮುಕ್ತ ಪ್ರವೇಶ ಎಂಬ ನಾಮಫಲಕ ಅಳವಡಿಸಬೇಕು. ಹಾಗೂ ಈ ಬಗ್ಗೆ ಅರಿವು ಮೂಡಿಸಲು ಜಿಲ್ಲೆಯ ಎಲ್ಲಾ ತಾಲ್ಲೂಕು ದಂಡಾಧಿಕಾರಿಗಳಿಗೆ ನಿರ್ದೇಶಿಸಬೇಕು ಎಂದು ಜಿಲ್ಲೆಯ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ ಮನವಿ ಮಾಡಿದೆ.

ಇದೇ ಸಂದರ್ಭದಲ್ಲಿ ಮುಖಂಡರಾದ ನರಸೀಯಪ್ಪ, ನರಸಿಂಹಯ್ಯ, ನಿಟ್ಟೂರು ರಂಗಸ್ವಾಮಿ ದೊಡ್ಡಯ್ಯ, ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್, ಎಂ.ಕೆ. ಸುಬ್ರಹ್ಮಣ್ಯ, ಡಿ.ಎಸ್.ಎಸ್. ಸಂಚಾಲಕ ಪಿ.ಎನ್.ರಾಮಯ್ಯ, ಬೇವಿನಹಳ್ಳಿ ಚನ್ನಬಸವಯ್ಯ, ರಾಮಯ್ಯ ಸೇರಿದಂತೆ ಜಿಲ್ಲೆಯ ದಲಿತ ಪರ, ಪ್ರಗತಿ ಪರ ಸಂಘನೆಯ ಮುಖಂಡರು ಇದ್ದರು.

Leave a Reply

Your email address will not be published. Required fields are marked *