ತುಮಕೂರು : ಶ್ರೀ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠಕ್ಕೆ ನೀಡಿದ್ದ ಅನುದಾನದ ಉಳಿಕೆ ಹಣ ಬಿಡುಗಡೆ ಮಾಡಲು ಸಚಿವ ಶಿವರಾಜ್ ತಂಗಡಿಯವರು ಕಮಿಷನ್ ನೀಡಲು ಒತ್ತಾಯಿಸಿರುವುದನ್ನು ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು ಖಂಡಿಸಿದ್ದರೆ.
ಶ್ರೀ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠಕ್ಕೆ ಹಿಂದಿನ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ₹3.5 ಕೋಟಿ ಹಣ ಮಂಜೂರು ಮಾಡಲಾಗಿತ್ತು. ಇದರಲ್ಲಿ ಈಗಾಗಲೇ ಮಠದ ಕಾಮಗಾರಿಗಳಿಗೆ ₹2.5ಕೋಟಿ ವೆಚ್ಚವಾಗಿ ಅನುದಾನ ಬಿಡುಗಡೆ ಮಾಡಲಾಗಿತ್ತು. ಸರ್ಕಾರವು ಬದಲಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತರುವಾಯ ಬಾಕಿ ₹1.5 ಕೋಟಿ ಹಣವನ್ನು ಬಿಡುಗಡೆ ಮಾಡಿರಲಿಲ್ಲ ಮಠದ ಸ್ವಾಮಿಗಳು ಬಾಕಿ ಬರಬೇಕಾದ ಹಣವನ್ನು ಬಿಡುಗಡೆ ಮಾಡಲು ಸಚಿವ ಶಿವರಾಜ್ ತಂಗಡಿಯವರಿಗೆ ಮನವಿ ಮಾಡಿದ ತರುವಾಯವು ಫಲ ದೊರೆಯದಿದ್ದಾಗ ಅನಿವಾರ್ಯವಾಗಿ ನ್ಯಾಯಾಲದ ಮೊರೆ ಹೋದರು ಎಂದು ತಿಳಿಸಿದ್ದಾರೆ.
ಘನವೆತ್ತ ನ್ಯಾಯಾಲಯವು ಶ್ರೀ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠಕ್ಕೆ ಬಾಕಿ ₹1.5ಕೋಟಿ ಹಣವನ್ನು ಬಿಡುಗಡೆ ಮಾಡಲು ಆದೇಶಿಸಿತು. ಹಿಂದುಳಿದ ವರ್ಗದ ಸಚಿವ ಶಿವರಾಜ್ ತಂಗಡಿಯವರು ನ್ಯಾಯಾಲಯದ ಆದೇಶವನ್ನು ನಿರ್ಲಕ್ಷಿಸಿ ಬಾಕಿ ಹಣ ಬಿಡುಗಡೆಗೆ ಶೇಕಡಾ 20 ರಿಂದ 25 ರಷ್ಟು ಕಮಿಷನ್ ನೀಡಲು ಒತ್ತಾಯಿಸಿರುವುದು ಅತ್ಯಂತ ಖಂಡನೀಯ, ನ್ಯಾಯಯುತವಾಗಿ ಬಾಕಿ ಹಣ ಬಿಡುಗಡೆಗೆ ಲಂಚ ಕೇಳುವ ಹೀನ ಮಟ್ಟಕ್ಕೆ ಸಚಿವರು ಕುಸಿದಿರುವುದು ನಾಚಿಗೇಡಿನ ಸಂಗತಿ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ರವರು ಬೇಸರ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರವು ಮಠಕ್ಕೆ ನೀಡಬೇಕಾದ ಹಣಕ್ಕೂ ಕಮೀಷನ್ ನೀಡಲು ಒತ್ತಾಯಿಸಿರುವುದು ಸರ್ಕಾರದಲ್ಲಿ ಮಠವಾಗಲಿ, ಮಂದಿರವಾಗಲಿ ಅಥವಾ ವ್ಯಕ್ತಿಯಾಗಲಿ ಲಂಚ ಕೊಟ್ಟರೇ ಮಾತ್ರ ಹಣ ಬಿಡುಗಡೆ ಮಾಡುವುದು ಎಂದಿರುವುದು ಎಲ್ಲ ಹಂತದಲ್ಲಿಯೂ ಹರಡಿರುವ ಭ್ರμÁ್ಟಚಾರಕ್ಕೆ ಕನ್ನಡಿ. ಹಿಡಿದಿದೆ. ಕೂಡಲೇ ಶ್ರೀ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಬಾಕಿ ಅನುದಾನ ಬಿಡುಗಡೆ ಮಾಡಬೇಕು ಹಿಂದುಳಿದ ವರ್ಗದ ಇಲಾಖೆಯಲ್ಲಿ ಅನುದಾನ ಬಿಡುಗಡೆಗೆ ಕಪ್ಪ ವಸೂಲಿಯ ಬಗ್ಗೆ ತನಿಖೆಗೆ ಆದೇಶಿಸಬೇಕು. ಹಿಂದುಳಿದ ವರ್ಗದ ಸಚಿವ ಶಿವರಾಜ್ ತಂಗಡಿಯವರು ಕೂಡಲೇ ರಾಜಿನಾಮೆ ನೀಡಬೇಕು ಎಂದು ಶಾಸಕರು ಒತ್ತಾಯಿಸಿದ್ದಾರೆ.