ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಎರಡು ದಿನ ಮುಂದಕ್ಕೆ ಹಾಕಲಾಗಿದೆ.
ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ‘ಇಂದು ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ( Karnataka Congress Candidate List ) ಬಿಡುಗಡೆಯಾಗಲಿದೆ ಎಂಬುದಾಗಿ ಹೇಳಲಾಗುತ್ತಿತ್ತು.
ಇದೀಗ ನಾಡಿದ್ದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದೆಹಲಿಗೆ ಹೋಗುವುದಕ್ಕೆ ಇನ್ನೂ ಕೂಡ ದಿನಾಂಕ ನಿಗದಿಯಾಗಿಲ್ಲ, ದೆಹಲಿಗೆ ಹೋಗುವಾಗ ನಾನು ಹೇಳಿ ಹೋಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನಾಳೆಯೋ, ನಾಡಿದ್ದೋ ಕಾಂಗ್ರೆಸ್ ಅಭ್ಯದರ್ಥಿಗಳ ಪಟ್ಟಿ ಬಿಡುಗಡೆ : ಡಿಕೆ ಶಿವಕುಮಾರ್
ಇಂದು ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ( Karnataka Congress Candidate List ) ಬಿಡುಗಡೆಯಾಗಲಿದೆ ಎಂಬುದಾಗಿ ಹೇಳಲಾಗುತ್ತಿತ್ತು. ಆದ್ರೇ ಇಂದು ಪಟ್ಟಿ ಬಿಡುಗಡೆ ಇಲ್ಲ. ನಾಳೆಯೋ, ನಾಡಿದ್ದೋ ಬಿಡುಗಡೆ ಆಗಲಿ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ( KPCC President DK Shivakumar ) ತಿಳಿಸಿದ್ದಾರೆ.
ಇಂದು ಬಿಜೆಪಿ ಎಂಎಲ್ಸಿ ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಇವತ್ತೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲು ನಿರ್ಧರಿಸಿದ್ದೆವು. ಎಐಸಿಸಿ ಅಧ್ಯಕ್ಷರಾದಂತ ಮಲ್ಲಿಕಾರ್ಜುನ ಖರ್ಗೆ ಹಬ್ಬ ಆಚರಣೆಯಲ್ಲಿದ್ದಾರೆ. ಹೀಗಾಗಿ ನಾಳೆಯೋ, ನಾಡಿದ್ದೋ ಪಟ್ಟಿ ಬಿಡುಗಡೆ ಆಗಲಿದೆ ಎಂದರು.ಇಂದು ಬಿಜೆಪಿ ಪಕ್ಷದ ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ ಪಕ್ಷಕ್ಕೆ ( Congress Party ) ಸೇರ್ಪಡೆಗೊಂಡಿದ್ದಾರೆ. ನಾಳೆಯೂ ಕೂಡ ಪಕ್ಷ ಸೇರ್ಪಡೆ ಆಗಲಿದ್ದಾರೆ ಎಂಬುದಾಗಿ ತಿಳಿಸಿದರು.
ದೇವರು ವರವೂ ಕೊಡಲ್ಲ, ಶಾಪವನ್ನೂ ಕೊಡಲ್ಲ. ಅವಕಾಶ ನೀಡುತ್ತಾನೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೇ ಬಡವರಿಗೆ ಅನುಕೂಲವಾಗಲಿದೆ. ಹೀಗಾಗಿ ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ ಎಂದರು. ಈ ಬಳಿಕ ಮಾತನಾಡಿದಂತ ಎಂಎಲ್ಸಿ ಬಾಬುರಾವ್ ಚಿಂಚನಸೂರ್, ನಾನು ಅವಕಾಶವಾದಿ ರಾಜಕಾರಣಿಯಲ್ಲ. ಮಾತು ಬೆಳ್ಳಿ ಮೌನ ಬಂಗಾರ ಎಂಬುದಾಗಿ ಹೇಳುವ ಮೂಲಕ, ಮತ್ತೇನು ಪ್ರತಿಕ್ರಿಯೆ ನೀಡಲಿಲ್ಲ.