ತುಮಕೂರು : ರಾಜ್ಯದ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜಯಭೇರಿ ಸಾಧಿಸಿದ್ದು, ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಚಕ್ರವ್ಯೂಹವನ್ನು ಭೇದಿಸದೆ ಸೋಲಿನ ಸರದಾರನಾಗಿ ಮುಂದುವರೆದಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮೊಮ್ಮಗ, ಮಾಜಿ ಮುಖ್ಯಮಂತ್ರಿ ಹಾಲಿ ಕೇಂದ್ರದ ಬೃಹತ್ ಕೈಗಾರಿಕಾ ಮಂತ್ರಿಯಾಗಿರುವ ಹೆಚ್.ಡಿ.ಕುಮಾರಸ್ವಾಮಿಯವರ ಮಗನಾಗಿರುವ ನಿಖಿಲ್ ಕುಮಾರಸ್ವಾಮಿ 3ನೇ ಬಾರಿ ಸೂಲು ಅನುಭವಿಸುವ ಮೂಲಕ ಸೋಲಿನ ಸರದಾರ ಎಂಬ ಬಿರುದನ್ನು ಪಡೆದುಕೊಂಡಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಾ ಇದೆ.
ತೀವ್ರ ಕುತೂಹಲ ಕೆರಳಿಸಿದ್ದ, ಸಿ.ಪಿ.ಯೋಗಿಶ್ವರ್ ಸೋತೆ ಬಿಡುತ್ತಾರೆಂದು ಬಿಂಬಿಸಲಾಗಿದ್ದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಅವರು ಎಣೆದ ಚಕ್ರವ್ಯೂಹವನ್ನು ನಿಖಿಲ್ ಕುಮಾರಸ್ವಾಮಿ ಭೇದಿಸಲಾಗದೆ ಮೂರನೇ ಬಾರಿಯೂ ಸೋತು ಸುಣ್ಣವಾಗಿದ್ದಾರೆ.
ಈ ಬಾರಿ ಅವರ ತಂದೆಯ ಕ್ಷೇತ್ರವಾಗಿದ್ದ ಚನ್ನಪಟ್ಟಣದಲ್ಲಿ ಮತದಾರರು ಕೈ ಹಿಡಿಯುತ್ತಾರೆಂಬುದನ್ನು ಸುಳ್ಳಾಗಿಸಿದ್ದು, ಡಿಕೆ ಸಹೋದರರು ಎಣೆದ ಚಕ್ರವ್ಯೂಹವನ್ನು ಭೇದಿಸುವ ನಿಪುಣತೆಯನ್ನು ಮೊಮ್ಮಗ ಮತ್ತು ಮಗನಿಗೆ ಧಾರೆಯೆರೆಯುವಲ್ಲಿ ತಾತ ಮತ್ತು ಅಪ್ಪ ವಿಫಲರಾಗಿದ್ದಾರೆ.
ರಾಜ್ಯದ ಮೂರು ಕ್ಷೇತ್ರಗಳಾದ ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ, ಶಿಗ್ಗಾವಿಯಲ್ಲಿ ಯಾಸಿರ್ ಪಠಾನ್ ಖಾನ್ ಮತ್ತು ಚನ್ನಪಟ್ಟಣದಲ್ಲಿ ಸಿ.ಪಿ.ಯೋಗಿಶ್ವರ್ ಗೆಲುವಿನ ಮೂಲಕ ಮತದಾರರು ಕಾಂಗ್ರೆಸ್ ಪಕ್ಷವನ್ನು ಕೈ ಹಿಡಿದಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷಕ್ಕೆ ಮತ ತಂದು ಕೊಟ್ಟವೆ ಎನ್ನಲಾಗುತ್ತಿದೆ.
ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಸೋಲನ್ನಪ್ಪಿದ್ದು, ಈ ಮೂಲಕ ರಾಜ್ಯದಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಬ್ಬರು ಸೋತಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳಿಗೆ ಈ ಸೋಲಿನಿಂದ ಮುಖಭಂಗವಾಗಿದ್ದು, ಸಿದ್ದರಾಮಯ್ಯನವರನ್ನು ಮೂಡಾ ಹಗರಣದಲ್ಲಿ ಸಿಲುಕಿಸಲು ಎರಡೂ ಪಕ್ಷಗಳು ಮಾಡಿದ ತಂತ್ರವೂ ಈ ಸೋಲಿಗೆಕಾರಣವಿರಬಹುದೆಂದು ವಿಶ್ಲೇಷಿಸಲಾಗುತ್ತಿದೆ.
ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇದೀಗ ಅವರ ಬಿದ್ದಿದ್ದು ಈಗಾಗಲೇ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿರುವಂತಹ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ 9 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಇನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದ ವಿಚಾರಕ್ಕೆ ಬರುವುದಾದರೆ ಚನ್ನಪಟ್ಟಣದಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಅವರು, 73417 ಮತಗಳನ್ನ ಪಡೆದುಕೊಂಡಿದ್ದು, ಇನ್ನು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು, 99,320 ಮತಗಳನ್ನ ಪಡೆದಿದ್ದಾರೆ. ಇಬ್ಬರ ಮಧ್ಯ ಒಟ್ಟು 25,193 ಸಿಪಿ ಯೋಗೇಶ್ವರ್ ಮತಗಳ ದಿಂದ ಮುನ್ನಡೆ ಸಾಧಿಸಿ ಗೆಲುವು ಸಾಧಿಸಿದ್ದಾರೆ.
ಇನ್ನೂ ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾನ್ ಖಾನ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಖಾನ್ ಅವರು 88,985 ಮತಗಳನ್ನು ಪಡೆದುಕೊಂಡಿದ್ದರೆ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರು 74,860 ಮತಗಳನ್ನು ಪಡೆದುಕೊಂಡಿದ್ದಾರೆ. ಹಾಗಾಗಿ ಇವರ ಮಧ್ಯೆ 14,428 ಮತಗಳ ಅಂತರವಿದೆ ಎಂದು ತಿಳಿದುಬಂದಿದೆ.
ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅನ್ನಪೂರ್ಣ ಇ ತುಕಾರಾಂ ಅವರು 88, 727 ಮತಗಳನ್ನು ಪಡೆದುಕೊಂಡಿದ್ದರೆ, ಬಿಜೆಪಿ ಅಭ್ಯರ್ಥಿಯಾದ ಬಂಗಾರು ಹನುಮಂತು ಅವರು 79,622 ಮತಗಳನ್ನು ಪಡೆದುಕೊಂಡಿದ್ದಾರೆ. ಹಾಗಾಗಿ ಅನ್ನಪೂರ್ಣ ಅವರು 9105 ಮತಗಳ ಅಂತರದಿಂದ ಗೆಲವು ದಾಖಲಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆ ಅμÉ್ಟೀ ಬಾಕಿ ಇದೆ ಎನ್ನಲಾಗಿದೆ.