ಫೆ.25ರಂದು ಭಾರತ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ : ಬಸ್‍ಗಳ ವ್ಯವಸ್ಥೆ

ತುಮಕೂರು : ಭಾರತ ಸಂವಿಧಾನ ಅಮೃತ ಮಹೋತ್ಸವದ ಅಂಗವಾಗಿ ಜನವರಿ 26ರಿಂದ ಭಾರತ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮವನ್ನು ನಡೆಸಲಾಗಿದ್ದು, ಇದರ ಅಂಗವಾಗಿ ಫೆಬ್ರವರಿ 25ರಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂವಿಧಾನ ಜಾಗೃತಿ ಜಾಥಾದ ಬೃಹತ್ ಸಮಾವೇಶವನ್ನು ರಾಷ್ಟ್ರೀಯ ಐಕ್ಯತಾ ಬಹಿರಂಗ ಸಮಾವೇಶವನ್ನು ಏರ್ಪಡಿಸಲಾಗಿದೆ.

ಸದರಿ ಸಮಾವೇಶದಲ್ಲಿ ಭಾಗವಹಿಸಲು ಸರ್ಕಾರದ ವತಿಯಿಂದ ತುಮಕೂರು ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯಿತಿಗೆ ತಲಾ 1 ರಂತೆ ಗ್ರಾಮ ಪಂಚಾಯಿತಿ ಕೇಂದ್ರದಿಂದ ಫೆಬ್ರವರಿ 25 ರಂದು ಬೆಳಿಗ್ಗೆ 9 ಗಂಟೆಗೆ ಹೊರಡುವಂತೆ ಬಸ್ಸುಗಳ ವ್ಯವಸ್ಥೆ ಮಾಡಲಾಗಿದ್ದು, ತಾಲ್ಲೂಕಿನ ದಲಿತ ಸಂಘಟನೆಗಳ ಮುಖಂಡರು ಮತ್ತು ಪದಾಧಿಕಾರಿಗಳು, ವಿವಿಧ ಎಲ್ಲಾ ಸಂಘ/ಸಂಘಟನೆಗಳ ಮುಖಂಡರುಗಳು ಮತ್ತು ಪದಾಧಿಕಾರಿಗಳು ಹಾಗೂ ಎಲ್ಲಾ ಸಾರ್ವಜನಿಕರು ಆಯಾ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಪರ್ಕದೊಂದಿಗೆ ಸಮಾವೇಶದಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸುವಂತೆ ಕೋರಲಾಗಿದ್ದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂತೆಯೇ ಸದರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಧುಗಿರಿ ತಾಲ್ಲೂಕಿನ ಎಲ್ಲಾ 39 ಗ್ರಾಮಪಂಚಾಯತಿಗಳಿಂದ ತಲಾ ಒಂದೊಂದು ಬಸ್ ವ್ಯವಸ್ಥೆ ಮಾಡಲಾಗಿದೆ. ತಾಲ್ಲೂಕಿನ ದಲಿತ ಪರ ಮುಖಂಡರು, ಸ್ತ್ರೀಶಕ್ತಿ ಸಂಘಟನೆ, ಸ್ವಸಹಾಯ ಸಂಘ, ಮಹಿಳೆಯರು ಹೋರಾಟಗಾರರು, ಸಾರ್ವಜನಿಕರು ಫೆಬ್ರವರಿ 25ರಂದು ಬೆಳಿಗ್ಗೆ 8.30 ಗಂಟೆಗೆ ಆಯಾ ಗ್ರಾಮ ಪಂಚಾಯಿತಿಗಳ ಆವರಣದಲ್ಲಿ ಖುದ್ದು ಹಾಜರಿದ್ದು, ಸದರಿ ಬಸ್‍ಗಳಲ್ಲಿ ತೆರಳಬೇಕಾಗಿ ಮಧುಗಿರಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *