ತುಮಕೂರು : ಜಿಲ್ಲೆಯಲ್ಲಿ ವಿಶ್ವ ದರ್ಜೆಯಲ್ಲಿ ಅಂತರ್ ರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ತುಮಕೂರು ತಾಲ್ಲೂಕು ಬೆಳ್ಳಾವಿ ಹೋಬಳಿ ಪಿ.ಗೊಲ್ಲಹಳ್ಳಿ ಗ್ರಾಮದಲ್ಲಿ 25 ಎಕರೆ ಹಾಗೂ ಸೋರೆಕುಂಟೆ ಗ್ರಾಮದಲ್ಲಿ 16.33 ಎಕರೆ ಒಟ್ಟು 41.33 ಎಕರೆ ಜಮೀನನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಇವರಿಗೆ ಮೀಸಲಿರಿಸಲಾಗಿದ್ದು, ಕ್ರೀಡಾ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಜಿಲ್ಲೆಯಲ್ಲಿ ಮೂಡಿ ಬರಲಿದೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಅವರಿಂದು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು.
ಪ್ರತಿನಿತ್ಯ ತುಮಕೂರಿನಿಂದ ಬೆಂಗಳೂರಿಗೆ ಪ್ರಯಾಣಿಸುವ ಜಿಲ್ಲೆ ಜನರ ಅನುಕೂಲಕ್ಕಾಗಿ ಮುಂದಿನ ದಿನದಲ್ಲಿ ಬೆಂಗಳೂರಿನಿಂದ ತುಮಕೂರಿನವರೆಗೂ ಮೆಟ್ರೋ ರೈಲು ಸೌಲಭ್ಯವನ್ನು ವಿಸ್ತರಿಸಲು ಆಯವ್ಯಯದಲ್ಲಿ ಪ್ರಸ್ತಾಪಿಸಲಾಗಿದ್ದು, ಯೋಜನೆಯನ್ನು ಶೀಘ್ರ ಕಾರ್ಯಗತಗೊಳಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾಸ್ಪತ್ರೆ ಆವರಣದಲ್ಲಿ 99 ಕೋಟಿ ರೂ. ಅಂದಾಜು ವೆಚ್ಚದಲ್ಲಿ 100 ಹಾಸಿಗೆಗಳುಳ್ಳ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಕೈಗೊಂಡಿದ್ದು, ಶೇ. 80ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಆರೋಗ್ಯ ತುಮಕೂರು ಅಭಿಯಾನ ಕಾರ್ಯಕ್ರಮದಡಿ ಆರೋಗ್ಯ ಇಲಾಖೆ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ 30 ವರ್ಷ ಮೇಲ್ಪಟ್ಟ 5.22 ಲಕ್ಷ ಜನರ ಆರೋಗ್ಯ ತಪಾಸಣೆ ಮಾಡಲಾಗಿದೆ. ತಪಾಸಣೆಯಲ್ಲಿ 25,000 ಮಂದಿಯಲ್ಲಿ ಮಧುಮೇಹ, ರಕ್ತದೊತ್ತಡ, ರಕ್ತಹೀನತೆ, ಇನ್ನಿತರೆ ರೋಗಗಳಿರುವುದು ಕಂಡು ಬಂದಿದ್ದು, ರೋಗಿಗಳ ಮನೆ ಬಾಗಿಲಿಗೆ ಔಷಧಿ ವಿತರಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಹೇಳಿದರು.
ಸರ್ಕಾರ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಸೇರಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಅರ್ಥ ಶಾಸ್ತ್ರಜ್ಞ ಅಮತ್ರ್ಯ ಸೇನ್ ಅವರ ಅಭಿವೃದ್ಧಿಯೇ ಸ್ವಾತಂತ್ರ್ಯ ಎಂಬ ಸೂತ್ರದಲ್ಲಿ ನಂಬಿಕೆಯಿಟ್ಟು ಪಂಚ ಗ್ಯಾರಂಟಿ ಯೋಜನೆಗಳನ್ನು ರೂಪಿಸಿ ಅನುಷ್ಟಾನ ಮಾಡುತ್ತಿದ್ದೇವೆ.
ಜಿಲ್ಲೆಯಲ್ಲಿ 6,25,908 ಪಡಿತರ ಕುಟುಂಬಗಳಿಗೆ ಅನುಕೂಲವಾಗಿದೆ. ಜಿಲ್ಲೆಯಲ್ಲಿ ಈವರೆಗೂ ಡಿಬಿಟಿ ಮೂಲಕ ಒಟ್ಟು 405.39 ಕೋಟಿ ರೂ.ಗಳನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ
ಎಂದು ತಿಳಿಸಿದರು.
ಕೆಎಸ್‍ಆರ್‍ಟಿಸಿ ನಿಗಮಕ್ಕೆ 229 ಕೋಟಿ ರೂ.ಗಳಷ್ಟು ಆದಾಯ ತಂದು ಕೊಟ್ಟಿದ್ದಾರೆ. ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಹೆಚ್ಚಳಕ್ಕನುಗುಣವಾಗಿ ಸಾರಿಗೆ ಸೌಲಭ್ಯ ಕಲ್ಪಿಸಲು ಹೊಸ ವಾಹನ ಹಾಗೂ ಚಾಲಕರನ್ನು ನಿಯೋಜಿಸಲಾಗಿದೆ ಎಂದರು.
ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಸಲುವಾಗಿ ನಮ್ಮ ಸರ್ಕಾರ ಜಾರಿಗೆ ತಂದಿರುವ ಪ್ರತಿಷ್ಠಿತ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ.ಗಳನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದ್ದು, ಇಲ್ಲಿಯವರೆಗೆ ಜಿಲ್ಲೆಯಲ್ಲಿ 6,13,440 ಫಲಾನುಭವಿಗಳ ಖಾತೆಗೆ ಒಟ್ಟು 1185 ಕೋಟಿ ರೂ.ಗಳನ್ನು ವರ್ಗಾಯಿಸಲಾಗಿದೆ ಎಂದರು.
ಸರ್ಕಾರವು 200 ಯೂನಿಟ್‍ಗಳಿಗಿಂತ ಕಡಿಮೆ ಉಪಯೋಗಿಸುವ ಗೃಹ ಬಳಕೆದಾರರಿಗೆ ಉಚಿತ ವಿದ್ಯುತ್ ಒದಗಿಸುವ ಗೃಹ ಜ್ಯೋತಿ ಯೋಜನೆಯಡಿ ಜಿಲ್ಲೆಯ 7,94,962 ಫಲಾನುಭವಿಗಳು ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದು, ಯೋಜನೆಗಾಗಿ ಈವರೆಗೂ 146.69 ಕೋಟಿ ರೂ. ಖರ್ಚು ಮಾಡಲಾಗಿದೆ, ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಯುವನಿಧಿ ಯೋಜನೆಯಡಿ 2023ರಲ್ಲಿ ಡಿಪ್ಲೊಮಾ ಪಾಸಾದವರಿಗೆ 1,500 ರೂ. ಹಾಗೂ ಯಾವುದೇ ಡಿಗ್ರಿ ಪಾಸಾದÀವರಿಗೆ 3,000 ರೂ.ಗಳ ಉದ್ಯೋಗ ಭತ್ಯೆಯನ್ನು ಗರಿಷ್ಠ 2 ವರ್ಷಗಳ ಅವಧಿವರೆಗೂ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 4012 ನಿರುದ್ಯೋಗಿಗಳಿಗೆ ಒಟ್ಟು 1.19ಕೋಟಿ ರೂ.ಗಳ ಉದ್ಯೋಗಭತ್ಯೆಯನ್ನು ಡಿ.ಬಿ.ಟಿ. ಮೂಲಕ ಅರ್ಹ ನಿರುದ್ಯೋಗಿ ಫಲಾನುಭವಿಗಳಿಗೆ ಪಾವತಿ ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾಸ್ಪತ್ರೆ ಆವರಣದಲ್ಲಿ 99 ಕೋಟಿ ರೂ. ಅಂದಾಜು ವೆಚ್ಚದಲ್ಲಿ 100 ಹಾಸಿಗೆಗಳುಳ್ಳ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಕೈಗೊಂಡಿದ್ದು, ಶೇ. 80ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಆರೋಗ್ಯ ತುಮಕೂರು ಅಭಿಯಾನ ಕಾರ್ಯಕ್ರಮದಡಿ ಆರೋಗ್ಯ ಇಲಾಖೆ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ 30 ವರ್ಷ ಮೇಲ್ಪಟ್ಟ 5.22 ಲಕ್ಷ ಜನರ ಆರೋಗ್ಯ ತಪಾಸಣೆ ಮಾಡಲಾಗಿದೆ. ತಪಾಸಣೆಯಲ್ಲಿ 25,000 ಮಂದಿಯಲ್ಲಿ ಮಧುಮೇಹ, ರಕ್ತದೊತ್ತಡ, ರಕ್ತಹೀನತೆ, ಇನ್ನಿತರೆ ರೋಗಗಳಿರುವುದು ಕಂಡು ಬಂದಿದ್ದು, ರೋಗಿಗಳ ಮನೆ ಬಾಗಿಲಿಗೆ ಔಷಧಿ ವಿತರಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ 29.72 ಕೋಟಿ ರೂ. ವೆಚ್ಚದಲ್ಲಿ 213 ಕೊಠಡಿ, 7.51 ಕೋಟಿ ರೂ. ವೆಚ್ಚದಲ್ಲಿ ಪದವಿಪೂರ್ವ ಕಾಲೇಜುಗಳ 30 ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ 4.90 ಕೋಟಿ ರೂ. ವೆಚ್ಚದಲ್ಲಿ 6 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಗುಬ್ಬಿ ಮತ್ತು ತಿಪಟೂರು ತಾಲ್ಲೂಕಿನ 131 ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಅಭಿವೃದ್ಧಿಗೆ 35.45 ಕೋಟಿ ರೂ. ಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕರುಗಳಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‍ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ.ಸಿಇಓ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್.ಕೆ.ವಿ., ಮಹಾನಗರಪಾಲಿಕೆ ಆಯುಕ್ತರಾದ ಅಶ್ವಿಜ, ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.