ಸಾಂಸ್ಕøತಿಕ ಚಟುವಟಿಕೆಗಳು ವ್ಯಕ್ತಿತ್ವ ವಿಕಸನಕ್ಕೆ ದಾರಿ : ಅಶೋಕ್ ಮೆಹ್ತ

ತುಮಕೂರು: ಕಾಲೇಜಿನಲ್ಲಿ ನಡೆಯುವ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಸಾಹೇ ವಿಶ್ವ ವಿದ್ಯಾನಿಲಯದ ಕುಲಸಚಿವರಾದ ಡಾ. ಅಶೋಕ್ ಮೆಹ್ತ ಅಭಿಪ್ರಾಯಪಟ್ಟರು.

ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ನಡೆದ ಶ್ರೀ ಸಿದ್ಧಾರ್ಥ ವ್ಯವಹಾರ ನಿರ್ವಹಣಾ ಅಧ್ಯಯನ ಕೇಂದ್ರ ಆಯೋಜಿಸಿರುವ “ಇನ್‍ಸ್ಪಿರೋ “ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಶೈಕ್ಷಣಿಕ ಜೀವನದ ಜೊತೆ ಜೊತೆಗೆ ವೈವಿಧ್ಯಮಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನಾಯಕತ್ವದ ಗುಣ ಹೆಚ್ಚಾಗಿ ಆತ್ಮ ವಿಶ್ವಾಸ ಮೂಡುತ್ತದೆ ಇಂತಹ ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶ್ರೀ ಸಿದ್ಧಾರ್ಥ ಸ್ಕೂಲ್ ಆಫ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜೀವ್ ಕುಮಾರ್ ಮಾತನಾಡಿ, ಇನ್‍ಸ್ಪಿರೋ ಅನ್ನೋದು ಹಲವಾರು ನೆನಪಿನ ಕ್ಷಣಗಳಿಗೆ ಸಾಕ್ಷಿಯಾಗಿದೆ. ಇಂತಹ ಸಾಂಸ್ಕೃತಿಕ ವೇದಿಕೆಗಳು ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವುದರ ಜೊತೆಗೆ ವಿದ್ಯಾರ್ಥಿಗಳ ಕ್ರಿಯಾತ್ಮಕ ಆಲೋಚನೆಗಳಿಗೆ ಇದೊಂದು ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳ ಜೀವನದಲ್ಲಿ ಇಂತಹ ಸಾಂಸ್ಕೃತಿಕ ಸಮಾರಂಭಗಳು ಉತ್ತಮ ಭವಿಷ್ಯವನ್ನು ರೂಪಿಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ಶ್ರೀ ಸಿದ್ಧಾರ್ಥ ವ್ಯವಹಾರ ನಿರ್ವಹಣಾ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾದ ಡಾ. ಮಮತ.ಜಿ ಮಾತನಾಡಿ, ನಿರ್ವಹಣಾ ವಿಭಾಗ ಪ್ರಾರಂಭವಾಗಿದ್ದು 2006ರಲ್ಲಿ ಅಲ್ಲಿಂದ ಇಲ್ಲಿಯವರೆಗೂ ನಮ್ಮ ಕಾರ್ಯ ಪ್ರವೃತ್ತಿಯಲ್ಲಿ ಕ್ರಿಯಾತ್ಮಕವಾಗಿ ಸಾಗುತ್ತಿದ್ದೇವೆ. ಈ “ಇನ್‍ಸ್ಪಿರೋ “ ಕಾರ್ಯಕ್ರಮವನ್ನು ನಾವು ಸತತವಾಗಿ 16 ವರ್ಷಗಳಿಂದ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದು ಈ ವರ್ಷವೂ ಬಹಳ ಸಡಗರದಿಂದ ನಡೆಸುತ್ತಿದ್ದೇವೆ ಇದಕ್ಕೆ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕವರ್ಗದವರು ಆಸಕ್ತಿಯಿಂದ ಭಾಗವಹಿಸಿದ್ದಾರೆ ಎಂದು ಶುಭ ಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಅಕಾಡೆಮೆಕ್ ಡೀನ್ ಡಾ. ರೇಣುಕಾಲತಾ, ಎಸ್.ಎಸ್.ಎಫ್.ಜಿ.ಸಿ ಪ್ರಾಂಶುಪಾಲರಾದ ಡಾ.ಹೇಮಲತಾ , ಬಾಲಕಿಯರ ವಿದ್ಯಾರ್ಥಿ ನಿಲಯದ ವಾರ್ಡನ್ ಡಾ. ಸುಷ್ಮಾ, ಹಾಗೂ ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು , ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Leave a Reply

Your email address will not be published. Required fields are marked *