
ತುಮಕೂರು : ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿಯಾಗಿ ಕನಕಪುರ ಬಂಡೆ, ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರು ಶ್ರೀ ಗಂಗಾಧರಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಉಪಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ ಕನಕಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಇಂದು ಬೆಂಗಳೂರಿನ ಕಂಠಿರವ ಸ್ಟೇಡಿಯಂನಲ್ಲಿ ಉಪಮುಖ್ಯಮಂತ್ರಿಯಾಗಿ ಇಂದು ರಾಜ್ಯಪಾಲರಾದ ಥಾವರ್‍ಚಂದ್ ಗ್ಲುಹೋಟ್ ಅವರಿಂದ ಪ್ರತಿಜ್ಞಾವಿಧಿ ಸ್ವೀಕರಿಸುವ ಮೂಲಕ ಪ್ರಮಾಣವಚನವನ್ನು ಶ್ರೀ ಗಂಗಾಧರಜ್ಜಯ್ಯನ ಹೆಸರಿನಲ್ಲಿ ಸ್ವೀಕರಿಸಿದರು.
ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್‍ರವರಿಗೆ ರಾಜ್ಯಪಾಲರಾದ ಥಾವರ್‍ಚಂದ್ ಗ್ಲುಹೋಟ್ ಅವರು ಪುಷ್ಪಗುಚ್ಚ ನೀಡುವುದರ ಮೂಲಕ ಶುಭ ಹಾರೈಸಿದರು.