
ತುಮಕೂರು : ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕೂಮಾರ್ ಅವರು ಜಿಲ್ಲೆಯ ತಿಪಟೂರು ತಾಲ್ಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠ ಮತ್ತು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಎರಡೂ ಮಠಗಳ ಶ್ರೀಗಳ ಆಶೀರ್ವಾದ ಪಡೆದರು.
ಇಂದು ಬೆಳಿಗ್ಗೆ ತಿಪಟೂರು ತಾಲ್ಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್ ಅವರು ವಿಶೇಷ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದ ಪಡೆದರು.

ಶಿವಕುಮಾರ್ ಅವರು ಸಂಕಷ್ಟದ ಸಂದರ್ಭªದಲ್ಲಿ ಮತ್ತು ಶುಭ ಕಾರ್ಯ ನೆರವೇರಿಸುವ ಸಂದರ್ಭಗಳಲ್ಲಿ ಕಾಡುಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಅಜ್ಜಯ್ಯನ ಆಶೀರ್ವಾದ ಪಡೆಯುತ್ತಾರೆ.
ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವಕ್ಕೆ ಬಹುಮತ ತಂದಿರುವ ಹಿನ್ನಲೆಯಲ್ಲಿ ಈ ಭೇಟಿ ನೀಡಿದ್ದರು.
ತದ ನಂತರ ಸಿದ್ದಗಂಗಾ ಮಠಕ್ಕೆ ಮಧ್ಯಾಹ್ನ ಭೇಟಿ ನೀಡಿ ಸ್ವಾಮಿಜಿಗಳ ಆಶೀರ್ವಾದ ಪಡೆದರು. ಮೊದಲಿಗೆ ಹಿರಿಯ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿ, ಧ್ಯಾನ ಮಂದಿರದಲ್ಲಿ ಕೆಲ ಕಾಲ ರುದ್ರಾಕ್ಷಿಯೊಂದಿಗೆ ಧ್ಯಾನ ಮಾಡಿದ ಡಿ.ಕೆ.ಶಿವಕುಮಾರ್,ನಂತರ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀಸಿದ್ದಲಿಂಗಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಕೆಲ ಕಾಲ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು.
ಈ ವೇಳೆ ಪಕ್ಷದ ತುಮಕೂರು ನಗರ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಾಯಸಂದ್ರ ರವಿಕುಮಾರ್, ಮುಖಂಡರಾದ ರೇವಣ್ಣಸಿದ್ದಯ್ಯ, ಮರಿಚನ್ನಮ್ಮ, ಸಿಮೆಂಟ್ ಮಂಜಣ್ಣ, ಪ್ರಚಾರ ಸಮಿತಿ ವಕ್ತಾರ ಕುಚ್ಚಂಗಿ ರಮೇಶ್ ಮತ್ತಿತರರು ಜೊತೆಗಿದ್ದರು.