ಪ.ಜಾತಿ – ಪ.ಪಂಗಡ ಉಪಯೋಜನೆಯ ವಿವಿಧ ಫಲಾನುಭವಿಗಳ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚನೆ

ತುಮಕೂರು : ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಅನುμÁ್ಠನಗೊಳಿಸಿರುವ ಯೋಜನೆಗಳಿಂದ ಫಲಾನುಭವಿಗಳ ಜೀವನ ಸುಧಾರಣೆಯಾಗಿರುವ ಕುರಿತು ವಿವಿಧ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಿ, ಸಮಗ್ರ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿಂದು ನಡೆದ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆ ಕಾಯ್ದೆ-2013 ಮತ್ತು 2017ರ ಅನುಷ್ಠಾನ ಅಧಿನಿಯಮಗಳಡಿ ಮಾರ್ಚ್-2023ರ ಮಾಹೆಯ ಅಂತ್ಯದವರೆಗೆ ವಿವಿಧ ಇಲಾಖೆಗಳು ಅನುμÁ್ಠನಗೊಳಿಸಿರುವ ಕಾರ್ಯಕ್ರಮಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ವರದಿಯ ಮಾಹಿತಿ ಪಡೆದ ಅವರು, ಪ.ಜಾತಿ ಮತ್ತು ಪ.ಪಂಗಡಗಳ ಜನರ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ವಿವಿಧ ಇಲಾಖೆಗಳು ವಿಳಂಬ ಮಾಡದೇ ಜಾಗ್ರತೆವಹಿಸಿ, ಫಲಾನುಭವಿಗಳನ್ನು ಆಯ್ಕೆ ಮಾಡಿ, ಮಂಜೂರಾದ ಅನುದಾನ ಶೇ.100ರಷ್ಟನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿವೆ. ಇದರಿಂದ ಜನರ ಜೀವನ ಸುಧಾರಣೆಯಾಗಿದ್ದು, ಈ ಕುರಿತು ಫಲಾನುಭವಿಗಳನ್ನು ಸಂದರ್ಶಿಸಿ, ಅವರ ಅಭಿಪ್ರಾಯ ಸಂಗ್ರಹಿಸಿ, ಯೋಜನೆಗಳು ಅನುಷ್ಠಾನವಾಗಿರುವ ಕುರಿತು ಸಮಗ್ರ ವರದಿ ಸಲ್ಲಿಸಬೇಕು. ಇದರಿಂದ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗಳು ಜನಪರವಾಗಿ ಅನುμÁ್ಠನಗೊಂಡ ರೀತಿಯನ್ನು ಅರಿತು, ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಸರ್ಕಾರದ ಯೋಜನೆಗಳ ಜಾರಿಗೊಳಿಸಲು ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ರೇಷ್ಮೆ ಇಲಾಖೆ, ಪಶು ಸಂಗೋಪನ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ಮತ್ತಿತರ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, ಯೋಜನೆಗಳಲ್ಲಿ ಪ.ಜಾತಿ ಹಾಗೂ ಪ.ಪಂಗಡದ ಅರ್ಹರಿಗೆ ಸೌಲಭ್ಯಗಳು ತಲುಪಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಈ ಯೋಜನೆಗಳ ಅನುμÁ್ಠನಕ್ಕೆ ಇಲಾಖೆಗಳು ಎಲ್ಲಾ ಇಲಾಖೆಗಳ ಯೋಜನಾ ಕಾರ್ಯಕ್ರಮಗಳ ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಬೇಕು. ಯೋಜನೆಗಳು ಸಮರ್ಪಕವಾಗಿ ಜಾರಿಯಾಗದೇ ಇರುವುದು ಕಂಡು ಬಂದರೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ, ತುಮಕೂರು ಉಪ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ನಗರದ ಭಾರತೀನಗರದ ವಿವಿಧ ಭಾಗಗಳಿಗೆ ಭೇಟಿ ನೀಡಿ ಮಳೆಯಿಂದ ಆಗಬಹುದಾದ ಹಾನಿಗಳ ತಡೆಗಟ್ಟುವ ಬಗ್ಗೆ ವಿಸ್ತøತ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಇಂದು ನಡೆದ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಮಾರ್ಚ-2023ರ ಮಾಹೆಯ ಅಂತ್ಯದವರೆಗೆ ವಿವಿಧ ಇಲಾಖೆಗಳು ಅನುμÁ್ಠನಗೊಳಿಸಿರುವ ಕಾರ್ಯಕ್ರಮಗಳ ಕುರಿತ ಪ್ರಗತಿ ಪರಿಶೀಲನಾ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ.ವಿದ್ಯಾಕುಮಾರಿ ಮಾತನಾಡಿ, ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಅನುμÁ್ಠನಗೊಳಿಸಿ ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳ ಸ್ಥಳ ಪರಿಶೀಲನೆ ಮಾಡಿ ವರದಿ ಸಲ್ಲಿಸುವಂತೆ ಪಿ.ಆರ್.ಇ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಿಗೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಕೃಷ್ಣಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ: ಮಂಜುನಾಥ್ ಡಿ.ಎನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಧರ್, ಜಿಲ್ಲಾ ಕಾರ್ಮಿಕಾಧಿಕಾರಿ ರಮೇಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಡಾ. ಶ್ರೀಧರ್, ಜಿಲ್ಲಾ ಪಶು ಸಂಗೋಪನ ಇಲಾಖೆಯ ಉಪ ನಿರ್ದೇಶಕರಾದ ಡಾ. ಜಯಣ್ಣ, ಡಿಡಿಪಿಐ ನಂಜಯ್ಯ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ರಘು, ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಇಮ್ರಾನ್‍ವುಲ್ಲಾ ಖಾನ್ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *