ತುಮಕೂರು : ರಾಜ್ಯ ಒಕ್ಕಲಿಗರ ಸಂಘದಿಂದ ತುಮಕೂರಿನ ಬಡ್ಡಿಹಳ್ಳಿ ಮುಖ್ಯರಸ್ತೆಯ ಕೃಷ್ಣನಗರದಲ್ಲಿ ಕಟ್ಟಿರುವ ವಿದ್ಯಾರ್ಥಿಗಳ ಉಚಿತ ವಸತಿ ನಿಲಯ ಹಾಗೂ ಸಮುದಾಯ ಭವನ ಕಟ್ಟಡದ ಉದ್ಘಾಟನಾ ಮತ್ತು ಪ್ರತಿಭಾ ಪುರಸ್ಕಾರವನ್ನು ಡಿಸೆಂಬರ್ 12ರ ಸೋಮವಾರ ಬೆಳಿಗ್ಗೆ 10-30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಕಿಮ್ಸ್ ಮೆಡಿಕಲ್ ಕಾಲೇಜು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರು ಹಾಗೂ ಬೆಂಗಳೂರು ವಿ.ವಿ.ಪುರಂನ ಕಾನೂನು ಮಹಾ ವಿದ್ಯಾಲಯದ ಶಿಸ್ತು ಪಾಲನಾ ಅಧ್ಯಕ್ಷರಾದ ಲೋಕೇಶ್ ಬಿ. ನಾಗರಾಜಯ್ಯ ಮತ್ತು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಆರ್. ಹನುಮಂತರಾಯಪ್ಪ ತಿಳಿಸಿದರು.
ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಉಚಿತ ವಿದ್ಯಾರ್ಥಿನಿಲದಲ್ಲಿ 200ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ಕಲ್ಪಿಸಲಾಗುವುದು, ಇದೇ ಸಂದರ್ಭದಲ್ಲಿ ಸುಮಾರು 500ಜನ ಭಾಗವಹಿಸುವ ಸಮುದಾಯ ಭವನವನ್ನು ಉದ್ಘಾಟನೆಯನ್ನು ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಶ್ರೀ ಗುರುಗುಂಡ ಬ್ರಹ್ಮೇಶ್ವರಸ್ವಾಮಿ ಪೀಠದ ಪೀಠಾಧಿಪತಿ ಶ್ರೀ ನಂಜಾವಧೂತ ಸ್ವಾಮೀಜಿ, ತುಮಕೂರು ಶ್ರೀ ಆದಿ ಆದಿಚುಂಚನಗಿರಿ ಶಾಖಾಮಠದ ಶ್ರೀ ಮಂಗಳನಾಥ ಸ್ವಾಮೀಜಿ, ಕುಣಿಗಲ್ ಶ್ರೀ ಅರೆಶÀಂಕರ ಮಠದ ಶ್ರೀ ಸಿದ್ದರಾಮ ಚೈತನ್ಯ ಸ್ವಾಮೀಜಿ ಮಾಡಲಿದ್ದಾರೆ ಎಂದು ತಿಳಿಸಿದರು.
ಮಾಜಿ ಪ್ರಧಾನ ಮಂತ್ರಿ ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡರು, ಗೃಹ ಸಚಿವ ಅರಗ ಜ್ಞಾನೇಂದ್ರ ಅವರುಗಳು ಉಪಸ್ಥಿತಿ ಇರುವರು ಎಂದು ತಿಳಿಸಿದ ಅವರು, ಅಧ್ಯಕ್ಷತೆಯನ್ನು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರು ಹಾಗೂ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ.ಎನ್.ಬಾಲಕೃಷ್ಣ ವಹಿಸಲಿದ್ದಾರೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗೆ ಸಂಘದ ಆಂತರಿಕ ಲೆಕ್ಕ ಪರಿಶೋಧಕರಾದ ಹನುಮಂತರಾಯಪ್ಪ ಆರ್, ಮತ್ತು ಕಿಮ್ಸ್ ಮೆಡಿಕಲ್ ಕಾಲೇಜು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರು ಹಾಗೂ ಬೆಂಗಳೂರು ವಿ.ವಿ.ಪುರಂನ ಕಾನೂನು ಮಹಾ ವಿದ್ಯಾಲಯದ ಶಿಸ್ತು ಪಾಲನಾ ಅಧ್ಯಕ್ಷರಾದ ಲೋಕೇಶ್ ಬಿ. ನಾಗರಾಜಯ್ಯ ಅವರುಗಳನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ವಿದ್ಯಾರ್ಥಿ ನಿಲಯವನ್ನು 7ಕೋಟಿ ವೆಚ್ಚದಲ್ಲಿ ಕಟ್ಟಲಾಗಿದ್ದು, ಮುಂದಿನ ದಿನಗಳಲ್ಲಿ ತುಮಕೂರಿನಲ್ಲಿ ಒಕ್ಕಲಿಗರ ಸಂಘದಿಂದ ಕೆಎಎಸ್, ಯುಪಿಎಸ್ ಸ್ಪರ್ಧಾತ್ಮಕ ವಿದ್ಯಾರ್ಥಿಗಳಿಗೆ ಕೋಚಿಂಗ್ ಸೆಂಟರ್‍ನ್ನು ತೆರೆಯಲಾಗುವುದು ಹಾಗೂ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜುಗಳು ಮತ್ತು ಆಸ್ಪತ್ರೆಯನ್ನು ತೆರೆಯಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ನಗರಾಧ್ಯಕ್ಷ ವಿಜಯಕುಮಾರ್, ಮಾಜಿ ಟೂಡಾ ಅಧ್ಯಕ್ಷ ಸಿದ್ದಲಿಂಗೇಗೌಡ, ಶ್ರೀನಿವಾಸ್, ಗಿರೀಶ್, ಕೃಷ್ಣಮೂರ್ತಿ, ರಮೇಶ್‍ಬಾಬು, ಶ್ರೀಧರ್ ಇನ್ನೂ ಮುಂತಾದವರಿದ್ದರು.