ತುಮಕೂರು : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 14ನೇ ಕನ್ನಡ ಸಾಹಿತ್ಯ ಸಮ್ಮೇಳನ ನಗರದ ಅಮಾನಿಕೆರೆಯ ಗಾಜಿನ ಮನೆಯಲ್ಲಿ ಡಿಸೆಂಬರ್ 15 ಮತ್ತು 16ರಂದು ನಡೆಯಲಿದೆ ಎಂದು ಜಿಲ್ಲಾ ಕ.ಸಾ.ಪ.ಅಧ್ಯಕ್ಷರಾದ ಕೆ.ಎಸ್.ಸಿದ್ದಲಿಂಗಪ್ಪ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 15ರಂದು ಸಮ್ಮೇಳನವನ್ನು ಬೆಳಿಗ್ಗೆ 10.30ಕ್ಕೆ ಸಾಹಿತಿ ಡಾ.ಹಂ.ಪ.ನಾಗರಾಜಯ್ಯ ಉದ್ಘಾಟನೆಯನ್ನು ಮಾಡಲಿದ್ದು, ನಿಕಟಪೂರ್ವ ಸಮ್ಮೇಳನಾಧ್ಯಕ್ಷರಾದ ಎಸ್.ಜಿ.ಸಿದ್ದರಾಮಯ್ಯನವರು ಹಾಲಿ ಸಮ್ಮೇಳನಾಧ್ಯಕ್ಷರಾದ ಎಂ.ವಿ.ನಾಗರಾಜರಾವ್ ಅವರಿಗೆ ಧ್ವಜವನ್ನು ಹಸ್ತಾಂತರಿಸಲಿದ್ದಾರೆ. ದಿವ್ಯ ಸಾನಿಧ್ಯವನ್ನು ಹಿರೇಮಠಾಧ್ಯಕ್ಷರಾದ ಡಾ. ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ವಹಿಸಲಿದ್ದಾರೆ ಎಂದರು.
ಎರಡೂ ದಿನಗಳ ಸಾಹಿತ್ಯ ಸಮ್ಮೇಳನದಲ್ಲಿ ಕವಿಗೋಷ್ಠಿಗಳು ಹಾಗೂ ತುಮಕೂರು ಜಿಲ್ಲೆಗೆ ಸಂಬಂಧಿಸಿದ ಸಾಹಿತ್ಯ, ಪತ್ರಿಕೆ ಮತ್ತು ಸಾಂಸ್ಕøತಿಕ ಗೋಷ್ಠಿಗಳು ನಡೆಯಲಿದ್ದು, ಪ್ರತಿ ದಿನ ಜಾನಪದ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.
ಸಮಾರೋಪ ಸಮಾರಂಭವು ಡಿಸೆಂಬರ್ 16ರ ಸಂಜೆ 4ಗಂಟೆಗೆ ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗಸ್ವಾಮಿಗಳ ಸಾನಿಧ್ಯದಲ್ಲಿ ನಡೆಯಲಿದ್ದು, ಅಧ್ಯಕ್ಷತೆಯನ್ನು ಸಂಸದ ಜಿ.ಎಸ್.ಬಸವರಾಜು ವಹಿಸಿಲಿದ್ದು, ಸಾಧಕರಿಗೆ ಸನ್ಮಾನವನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ಮಹೇಶ್ ಜೋಶಿ ಮಾಡಲಿದ್ದು, ಸಮಾರೋಪ ಭಾಷಣವನ್ನು ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕರಾದ ಹುಣಸವಾಡಿ ರಾಜನ್ ಮಾಡಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಾಹಿತಿ ಕವಿತಾಕೃಷ್ಣ, ಕ.ಸಾ.ಪ. ಕಾರ್ಯಧ್ಯಕ್ಷರಾದ ಸಣ್ಣಹೊನ್ನಯ್ಯ ಕಂಟಲಗೆರೆ, ಕೋಶಾಧ್ಯಕ್ಷರಾದ ಎಂ.ಎಚ್.ನಾಗರಾಜು, ಮಹದೇವಪ್ಪ ಉಪಸ್ಥಿತರಿದ್ದರು.