ತುಮಕೂರು : ತುಮಕೂರು ವಿಶ್ವವಿದ್ಯಾನಿಲಯದ ಕುವೆಂಪು ಅಧ್ಯಯನ ಪೀo ಮತ್ತು ಕರ್ನಾಟಕ ಲೇಖಕಿಯರ ಸಂಘ ತುಮಕೂರು ಜಿಲ್ಲಾ ಶಾಖೆಯು ಡಿಸೆಂಬರ್ 29ರ ವಿಶ್ವಮಾನವ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸವನ್ನು ತುಮಕೂರು ವಿ.ವಿ.ಯ ಡಾ.ಸದಾನಂದ ಮಯ್ಯ ಸಭಾಂಗಣದಲ್ಲಿ ಬೆಳಿಗ್ಗೆ 10ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ವಿಶೇಷ ಉಪನ್ಯಾಸವನ್ನು ಕುವೆಂಪು ಚಿಂತನೆಗಳ ಸಾಂಸ್ಕøತಿಕ ಮಹತ್ವ ಕುರಿತು ಮೈಸೂರಿನ ಹಿರಿಯ ಸಾಹಿತಿಗಳಾದ ಪ್ರೊ.ಕಾಳೇಗೌಡ ನಾಗವಾರ ನೀಡಲಿದ್ದು, ಅಧ್ಯಕ್ಷತೆಯನ್ನು ಕುಲಪತಿಗಳಾದ ಪ್ರೊ.ಎಂ.ವೆಂಕಟೇಶ್ವರಲು ವಹಿಸಲಿದ್ದು, ಕುಲಸಚಿವರಾದ ಶ್ರೀಮತಿ ನಾಹಿದಾ ಜಮ್ ಜಮ್ ಉಪಸ್ಥಿತರಿರುವರು.
ತುಮಕೂರು ವಿಶ್ವವಿದ್ಯಾನಿಲಯದ ಕುವೆಂಪು ಅಧ್ಯಯನ ಪೀಠದ ಸಂಯೋಜಕರಾದ ಡಾ.ಗೀತಾ ವಸಂತ ಮತ್ತು ಕರ್ನಾಟಕ ಲೇಖಕಿಯರ ಸಂಘ ತುಮಕೂರು ಜಿಲ್ಲಾ ಅಧ್ಯಕ್ಷರಾದ ಮಲ್ಲಿಕಾ ಬಸವರಾಜು ಭಾಗವಹಸಿಸುವರು.