ತುಮಕೂರು : ಹಂದಿಜೋಗೀಸ್ ಜಾತಿ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪಡೆದು ಸರ್ಕಾರದ ಸವಲತ್ತುಗಳನ್ನು ಪಡೆಯುತ್ತಿರುವರಿಗೆ ಪತ್ತೆ ಹಚ್ಚಿ ಶಿಕ್ಷೆಗೊಳ ಪಡಿಸುವಂತೆ ತುಮಕೂರು ಜಿಲ್ಲಾ ಹಂದಿಜೋಗೀಸ್ ಸಂಘ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರನ್ನು ಭೇಟಿ ಮಾಡಿ ಒತ್ತಾಯಿಸಿತು.
ಆನವರಿ 12ರ ಸೋಮವಾರ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಕೃಷ್ಣಪ್ಪನವರನ್ನು ಭೇಟಿ ಮಾಡಿ, ತುಮಕೂರು ಜಿಲ್ಲೆಯಲ್ಲಿ ಹಂದಿಜೋಗಿಸ್ ಜನಾಂಗದ ಜಾತಿ ಪ್ರಮಾಣಪತ್ರಗಳನ್ನು ಇತರೆ ಜನಾಂಗದವರು ಸುಳ್ಳು ದಾಖಲಾತಿಗಳನ್ನು ನೀಡಿ ಅಕ್ರಮವಾಗಿ ಅಲೆಮಾರಿ ಪರಿಶಿಷ್ಟ ಜಾತಿಗೆ ಸೇರಿದ ಹಂದಿಜೋಗಿಸ್ ಜನಾಂಗದ ಜಾತಿ ಪ್ರಮಾಣಪತ್ರಗಳನ್ನು ಪಡೆದುಕೊಂಡು ಹಂದಿಜೋಗಿಸ್ ಜನಾಂಗಕ್ಕೆ ಸಿಗಬೇಕಾದ ಸರ್ಕಾರದ ಸೌಲಭ್ಯಗಳು ಮತ್ತು ಸವಲತ್ತುಗಳನ್ನು ಪೆಡೆದುಕೋಳ್ಳುತ್ತಿದ್ದಾರೆ ಇದರಿಂದ ನಿಜವಾದ ಹಂದಿಜೋಗಿಸ್ ಜನಾಂಗದವರಿಗೆ ತೊಂದರೆಯಾಗುತ್ತಿದೆ ಎಂದು ತಿಳಿಸಿದ್ದಾರೆ.
ಹಂದಿಜೋಗಿಸ್ ಜನಾಂಗದವರ ಅನಕ್ಷರತೆ, ಬಡತನ ಧ್ವನಿ ಎತ್ತದ ನಾಯಕರಿಲ್ಲದ ಕಾರಣ ಕಳೆದ ಹತ್ತಾರು ವರ್ಷಗಳಿಂದ ತುಮಕೂರು ಜಿಲ್ಲೆಯಲ್ಲಿ ಹೆಳವ ಜನಾಂಗದವರು ಮತ್ತು ಇತರರು, ಹಂದಿ ಸಾಕುವ ಮತ್ತು ಹಂದಿ ಮಾರಾಟ ಮಾಡುವ ಹೆಸರಿನಲ್ಲಿ ನಾವೇ ಹಂದಿಜೋಗೀಸ್ ಗಳೆಂದು ಜಾತಿ ಪ್ರಮಾಣ ಪತ್ರಗಳನ್ನು ಪಡೆದುಕೊಂಡು ನಿಜವಾದ ಹಂದಿಜೋಗಿಸ್ ಜನಾಂಗದವರ ಮೇಲೆ ದೌರ್ಜನ್ಯಗಳನ್ನು ಮಾಡುತ್ತಿದ್ದು ನಿಜವಾದ ಅಲೆಮಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಮನವಿ ಸಲ್ಲಿಸಿದ್ದಾರೆ.

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಸಾತೇನಹಳ್ಳಿಯ ನಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ವೆನಂ 49ರಲ್ಲಿ ಹಂದಿಜೋಗಿಸ್ ಜನಾಂಗಕ್ಕೆ ಮೀಸಲಾಗಿದ್ದ 02 ಎಕರೆ ಜಮೀನಿನಲ್ಲಿ ಅಕ್ರಮ ನಿವೇಶನಗಳನ್ನು ಪಡೆದುಕೊಂಡಿರುತ್ತಾರೆ, ಗುಬ್ಬಿ ತಾಲ್ಲೂಕಿನ ಗುಬ್ಬಿ ಪೆÇಲೀಸ್ ಠಾಣೆಯ 100 ಮೀಟರ್ ಬಳಿ ಇರುವ ಬಂಗ್ಲೊಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇವರ ಶಾಲಾ ದಾಖಲಾತಿಗಳಲ್ಲಿ ಹೆಳವ ಜಾತಿ ಇರುತ್ತದೆ, ಆದರೆ ಸಾತೇನಹಳ್ಳಿ ಸರ್ಕಾರಿ ಕಿರಿಯ-ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇವರ ಮಕ್ಕಳ ದಾಖಲಾತಿಯಲ್ಲಿ ಹಂದಿಜೋಗಿಸ್ ಎಂದು ದಾಖಲಿಸಿ, ತಮ್ಮ ಮಕ್ಕಳ ಜಾತಿಯನ್ನೇ ಬದಲಾಯಿಸಿದ್ದಾರೆ.
ತುಮಕೂರು ಜಿಲ್ಲೆ ಅಮಲಾಪುರ ಸರ್ವೆ ನಂ 31 ರಲ್ಲಿ ಹಂದಿಜೋಗಿಸ್ ಜನಾಂಗಕ್ಕೆ ಮೀಸಲಾಗಿದ್ದ 01 ಎಕರೆ ಜಮೀನಿನಲ್ಲಿ ಅಕ್ರಮ ನಿವೇಶನಗಳನ್ನು ಸುಳ್ಳು ಜಾತಿ ದಾಖಲಾತಿಗಳನ್ನು ನೀಡಿ ಪಡೆದುಕೊಂಡಿರುತ್ತಾರೆ ಇದನ್ನು ಪರಿಶೀಲಿಸಲು ಮನವಿ ಮಾಡಿದ್ದಾರೆ.
ಅಲೆಮಾರಿ ಬುಡಕಟ್ಟು ಅಭಿವೃದ್ದಿ ಮಹಾಸಭಾ ತುಮಕೂರು ಜಿಲ್ಲಾಧ್ಯಕ್ಷೆ ಶ್ರೀಮತಿ ರಾಮಕ್ಕ ಮೂಲತಃ ಹೆಳವ ಸಮುದಾಯಕ್ಕೆ ಸೇರಿದವರಾಗಿದ್ದು ಇವರೇ ಸದರಿ ಸುಳ್ಳು ಜಾತಿ ಪ್ರಮಾಣ ಪತ್ರದ ಸೂತ್ರದಾರರಾಗಿದ್ದು ಇವರ ಮೇಲೆ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.
ಇದೇ ರೀತಿ ಜಾತಿಯ ಪ್ರಮಾಣ ಪತ್ರಗಳು ಚಿಕ್ಕನಾಯಕನಹಳ್ಳಿ ಮತ್ತು ಸಿರಾ ತಾಲ್ಲೂಕಿನಲ್ಲಿಯೂ ಅಕ್ರಮವಾಗಿ ಪಡೆದುಕೊಂಡಿರುತ್ತಾರೆ.
ಈ ಬಗ್ಗೆ ಈಗಾಗಲೇ ತುಮಕೂರು ಜಿಲ್ಲಾಧಿಕಾರಿಗಳಿಗೆ, ಜಂಟಿ ನಿರ್ದೇಶಕರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ತುಮಕೂರು ಹಾಗೂ ಉಪ ಪೆÇಲೀಸ್ ಅಧೀಕ್ಷಕರು ನಾಗರೀಕ ಹಕ್ಕುಗಳ ಜಾರಿ ನಿರ್ದೇಶನಾಲಯ ತುಮಕೂರು ಮತ್ತು ವಿವಿಧ ತಾಲ್ಲೂಕಿನ ತಹಶೀಲ್ದಾರರಿಗೆ ಮನವಿ ನೀಡಿ ಸರಿಪಡಿಸಲು ಕೋರಿರುತ್ತದೆ. ಧ್ವನಿ ಇಲ್ಲದ ಸಮುದಾಯವಾದ್ದರಿಂದ ಯಾರು ಸಹ ಕ್ರಮ ಕೈಗೊಂಡಿರುವುದಿಲ್ಲ ಎಂದು ತಿಳಿಸಿದ್ದಾರೆ.
ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ಅಕ್ರಮವಾಗಿ ಅಥವಾ ಸುಳ್ಳು ದಾಖಲಾತಿಗಳನ್ನು ನೀಡಿ ಪಡೆದಿರುವ ಹಂದಿಜೋಗೀಸ್ ಜಾತಿ ಪ್ರಮಾಣ ಪತ್ರಗಳು ರದ್ದಾಗಬೇಕು ಮತ್ತು ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ತುಮಕೂರು ಜಿಲ್ಲಾ ಹಂದಿಜೋಗಿಸ್ ಸಂಘ ತುಮಕೂರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಕೃಷ್ಣಪ್ಪನವರನ್ನು ಭೇಟಿ ಮಾಡಿ ಅಗ್ರಹಿಸಿದರು.
ಈ ಸಂಧರ್ಭದಲ್ಲಿ ತುಮಕೂರು ಜಿಲ್ಲಾ ಹಂದಿಜೋಗಿಸ್ ಸಂಘದ ಅಧ್ಯಕ್ಷ ಮುಕುಂದ, ಉಪಾಧ್ಯಕ್ಷ ಶ್ರೀನಾವಾಸ್ , ಕಾರ್ಯದರ್ಶಿ ಚಂದ್ರಶೇಖರ್, ವೇಣು, ಮತ್ತಿತರರು ಹಾಜರಿದ್ದರು