ತುಮಕೂರು:ಕೇಂದ್ರ ಸರಕಾರ ವಕ್ಫ್ ತಿದ್ದುಪಡಿ ಮಸೂದೆ-2024ರ ಮೂಲಕ ಅಲ್ಪಸಂಖ್ಯಾತ ಸಮುದಾಯದ ಅರ್ಥಿಕ ಮೂಲಕ್ಕೆ ಕೊಡಲಿ ಪೆಟ್ಟು ಕೊಡಲು ಹೊರಟಿದ್ದು,ಕೂಡಲೇ ಹಿಂದೆ ಸರಿಯಬೇಕು ಎಂದು ಆಗ್ರಹಿಸಿ ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಅಫ್ ಸಿವಿಲ್ ರೈಟ್ಸ್ ಇಂಡಿಯಾ ತುಮಕೂರು ಶಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ವಕ್ಫ್ ತಿದ್ದುಪಡಿ ಮಸೂಸೆ-2024ರ ಜಂಟಿ ಸಮಿತಿ ಅಧ್ಯಕ್ಷರಾದ ಜಗದಾಂಬಿಕಾ ಪಾಲ್ ಅವರಿಗೆ ಮನವಿ ಸಲ್ಲಿಸಿದರು.
ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಅಫ್ ಸಿವಿಲ್ ರೈಟ್ಸ್ ಇಂಡಿಯಾ ತುಮಕೂರು ಜಿಲ್ಲಾ ಶಾಖೆಯ ಅಧ್ಯಕ್ಷ ತಾಜುದ್ದೀನ್ ಷರೀಫ್ ಅವರ ನೇತೃತ್ವದಲ್ಲಿ ಖಾಲಿದ್ ಸುಹೇಲ್, ಹಮೀದ್ ಬೇಗ್, ಗೌನ್‌ಪಾಷಾ, ಅಫ್ಜಲ್‌ಖಾನ್, ಅಪ್ಸರ್ ಪಾಷ, ಇನ್ನಿತರರು ಜಿಲ್ಲಾಧಿಕಾರಿಗಳಿಗೆ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಕೇಂದ್ರ ಸರಕಾರ ವಕ್ಫ್ ತಿದ್ದುಪಡಿ ಮಸೂದೆ 2024 ಭಾರತದಲ್ಲಿ ವಕ್ಫ್ ಆಸ್ತಿಗಳ ಆಡಳಿತ ಮತ್ತು ಪಾರದರ್ಶಕತೆಯನ್ನು ಸುಧಾರಿಸುವ ಗುರಿಯನ್ನು ಹೊಂದಿರುವ 1995 ರ ವಕ್ಫ್ ಕಾಯಿದೆಗೆ ಹಲವಾರು ಬದಲಾವಣೆಗಳನ್ನು ತರಲು ಮುಂದಾಗಿದೆ.ವಕ್ಫ್ ತಿದ್ದುಪಡಿ ಮಸೂದೆಯಿಂದ ಸಮುದಾಯದ ಪ್ರಾತಿನಿಧ್ಯವನ್ನು ಕಡಿಮೆ ಮಾಡಿ, ರಾಜಕೀಯ ಹಸ್ತಕ್ಷೇಪವನ್ನು ಹೆಚ್ಚು ಮಾಡುವುದರಿಂದ ವಕ್ಫ್ ಮೂಲ ಆಶಯಕ್ಕೆ ಧಕ್ಕೆಯಾಗಲಿದೆ.ಅಲ್ಲದೆ,ಕಾನೂನು ವಿವಾದಗಳಿಗೆ ಕಾರಣವಾಗುವ ಆಸ್ತಿ ಮಾಲೀಕತ್ವ ಮತ್ತು ನಿರ್ವಹಣೆಯ ಮೇಲಿನ ಕಾನೂನು ವಿವಾದಗಳಿಗೆ ಕಾರಣವಾಗುವ ಸಾಧ್ಯತೆ ಹೆಚ್ಚಿದೆ.ಧಾರ್ಮಿಕವಲ್ಲದ ಆಸ್ತಿಗಳನ್ನು ವಕ್ಫ್ ಮಂಡಳಿಗಳ ನಿಯಂತ್ರಣ ತರುವುದರಿಂದ ರಾಜ್ಯದ ಕಾನೂನುಗಳೊಂದಿಗೆ ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್,ವಕ್ಫ್ ತಿದ್ದುಪಡಿ ಮಸೂದೆ-2024ರಿಂದ ಸ್ಥಳೀಯ ಪ್ರಾಧಿಕಾರದ ಹಿಡಿತ ದುರ್ಬಲಗೊಂಡು, ವಿಕೇಂದ್ರೀಕರಣಕ್ಕೆ ಬದಲಾಗಿ,ಕೇಂದ್ರೀಕೃತ ವ್ಯವಸ್ಥೆಯಿಂದ ಸರಕಾರದ ಹಸ್ತಕ್ಷೇಪ ಹೆಚ್ಚಾಗಲಿದೆ ಎಂಬುದು ನಮ್ಮಗಳ ಅಭಿಪ್ರಾಯವಾಗಿದೆ.ಇದು ಮೂಲಕ ವಕ್ಪ್ ಕಾಯ್ದೆಯ ಆಶಯಗಳಿಗೆ ವಿರುದ್ದವಾಗಿದೆ.ಹಾಗಾಗಿ ತಿದ್ದುಪಡಿ ಮಸೂದೆಯನ್ನು ವಿರೋಧಿಸುವುದಾಗಿ ತಿಳಿಸಿದರು
ಹೊಸ ಮಸೂಧೆಯಲ್ಲಿ ವಕ್ಫ್ ಆಸ್ತಿಯ ವಿಲೇವಾರಿ ಮೇಲಿನ ಮೇಲ್ವಿಚಾರಣೆಯನ್ನು ಕಡಿಮೆ ಮಾಡುವುದರಿಂದ ಭ್ರಷ್ಟಾಚಾರಕ್ಕೆ ಕಾರಣವಾಗುವ ಸಾಧ್ಯತೆ ಹೆಚ್ಚಿದೆ.ಬೆಲೆ ಬಾಳುವ ವಕ್ಫ್ ಭೂಮಿಯನ್ನು ದತ್ತಿ ಅಥವಾ ಧಾರ್ಮಿಕ ಉದ್ದೇಶಗಳಿಗಿಂತ,ವಾಣಿಜ್ಯ ಹಿತಾಸಕ್ತಿಗಳಿಗೆ ಮಾರಾಟ ಅಥವಾ ಗುತ್ತಿಗೆ ನೀಡುವುದರಿಂದ ಸಮುದಾಯದ ಕಲ್ಯಾಣಕ್ಕಾಗಿ ಸೇವೆ ಸಲ್ಲಿಸುವ ವಕ್ಫ್ ಆಸ್ತಿಗಳ ಉದ್ದೇಶವನ್ನು ದುರ್ಬಲಗೊಳಿಸುವ ಸಾಧ್ಯತೆ ಹೆಚ್ಚಿದೆ.ಹಾಗಾಗಿಯೇ ತಿದ್ದುಪಡಿ ವಸೂದೆಯನ್ನು ನಾವು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದರು.