ತುಮಕೂರು: ಕಾಡುಗೊಲ್ಲ ಬುಡಕಟ್ಟು ಜನಾಂಗದವರನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸುವಂತೆ ಕರ್ನಾಟಕ ಕಾಡುಗೊಲ್ಲ ಅಸ್ಮಿತೆ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ನಾಗಣ್ಣ ಜಿ.ಕೆ. ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಡುಗೊಲ್ಲರು ಕರ್ನಾಕದ ಪ್ರಾಂತ ಬುಡಕಟ್ಟು ಜನಾಂಗವಾಗಿದ್ದು ಕಾಡು ಮತ್ತು ಕಾಡಂಚಿನ ಸ್ಥಳಗಳಲ್ಲಿ ಪ್ರತ್ಯೇಕ ಹಟ್ಟಿಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದು, ಕುರಿ, ದನ ಮೇಯಿಸುವುದನ್ನೇ ಬದುಕಿನ ಮೂಲ ವೃತ್ತಿಯಾಗಿಸಿಕೊಂಡಿದ್ದಾರೆ, ಅಪ್ಪಟ ಕನ್ನಡ ಬುಡಕಟ್ಟು ಜನರಾದ ಇವರು ತಮ್ಮದೇ ಆದ ವಿಶಿಷ್ಟ ಸಂಪ್ರದಾಯ ಆಚರಣೆ ಮಾಡುತ್ತಾ ಜಗತ್ತಿನ ಸಂಸ್ಕøತಿ ಚಿಂತಕರ ಮಾನವ ಶಾಸ್ತ್ರಜ್ಞರ ಗಮನ ಸೆಳೆದಿದ್ದಾರೆ. ಪರಿಶಿಷ್ಟ ಪಂಗಡಕ್ಕೆ ಸೇರುವ ಎಲ್ಲಾ ಲಕ್ಷಣಗಳನ್ನು ಒಳಗೊಂಡಿದ್ದರೂ ಆಳುವ ಸರ್ಕಾರಗಳು ಕಾಡುಗೊಲ್ಲ ಜನಾಂಗವನ್ನು ಪರಿಶಿಷ್ಠ ಪಂಗಡ ಪಟ್ಟಿಗೆ ಸೇರಿಸಲು ಮುಂದಾಗದಿರುವುದು ವಿಷಾದನೀಯ ಎಂದರು.
ಮೈಸೂರು ವಿಶ್ವವಿದ್ಯಾಲಯದ ಮಾನವ ಶಾಸ್ತ್ರ ವಿಭಾಗದ ಪ್ರೊಪೆಸರ್ ಅನ್ನಪೂರ್ಣಮ್ಮ ಅವರು ನಡೆಸಿದ ಕುಲಶಾಸ್ತ್ರೀಯ ಅಧ್ಯಯನದ ವರದಿ ಆಧರಿಸಿ ಕರ್ನಾಟಕ ಸರ್ಕಾರ 2014 ರಲ್ಲಿ ರಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಶಿಪಾರಸ್ಸು ಮಾಡಿದೆ . ಆದರೆ ಕೇಂದ್ರ ಸರ್ಕಾರ ಇದನ್ನು ಪರಿಶಿಷ್ಠ ಪಂಗಡಕ್ಕೆ ಸೇರಿಸುವ ಬಗ್ಗೆ ಕಾಳಜಿ ವಹಿಸಿಲ್ಲ ಎಂದು ದೂರಿದರು.
ಕಾಡುಗೊಲ್ಲ ಜನಾಂಗದವರು ಹೆಚ್ಚಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ನಾರಾಯಣಸ್ವಾಮಿ ಅವರು ಹಲವು ಬಾರಿ ಹೇಳಿಕೆ ನೀಡಿ ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತಾವು ಮತ್ತು ಸರ್ಕಾರ ಬದ್ಧವಾಗಿದೆ ಎನ್ನುವ ಭರವಸೆ ನೀಡಿದ್ದಾರೆ. ಆದರೆ ಇಲ್ಲಿಯವರೆಗೂ ಅದು ಕಾರ್ಯರೂಪಕ್ಕೆ ಬಂದಿಲ್ಲ, ಜೊತೆಗೆ ಚುನಾವಣೆ ಸಂದರ್ಭದಲ್ಲಿ ಕಾಡುಗೊಲ್ಲ ನಿಗಮವನ್ನ ಸ್ಥಾಪಿಸಿ ಸಮುದಾಯದ ಕಣ್ಣೊರೆಸುವ ತಂತ್ರವಾಗಿದೆ ಎಂದರು.
ಇತ್ತೀಚೆಗೆ ನಡೆದ ಒಕ್ಕೂಟ ಸರ್ಕಾರದ ಕ್ಯಾಬಿನೆಟ್ ಸಭೆಯಲ್ಲಿ ಕರ್ನಾಟಕದ ಬೆಟ್ಟ ಕುರುಬ ಸೇರಿದಂತೆ ದೇಶದ 5 ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ನಿರ್ಣಯವನ್ನು ತೆಗೆದು ಕೊಳ್ಳಲಾಗಿದೆ . ಅದರ ಕಾಡುಗೊಲ್ಲ ಸಮುದಾಯವನ್ನು ಎಸ್.ಟಿ. ಪಟ್ಟಿಗೆ ಸೇರಿಸುವ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಕೇಂದ್ರ ಸರ್ಕಾರಕ್ಕೆ ಈ ಸಮುದಾಯದ ಬಗ್ಗೆ ಇರುವ ನಿರ್ಲಕ್ಷ್ಯ ಧೋರಣೆಯನ್ನು ತೂರಿಸುತ್ತದೆ ಎಂದರು.
ಕಾಡುಗೊಲ್ಲರು ವಾಸಿಸುವ ಲೋಕಸಭಾ ಮತ್ತು ವಿಧಾನ ಸಭಾ ಕ್ಷೇತ್ರಗಳನ್ನು ಪ್ರತಿನಿಧಿಸುವ ಸದಸ್ಯರು ಕಾಡುಗೊಲ್ಲ ಜನಾಂಗವನ್ನು ಪರಿಶಿಷ್ಠ ಪಂಗಡ ಪಟ್ಟಿಗೆ ಸೇರಿಸುವಂತೆ ಒಕ್ಕೂಟ ಸರ್ಕಾರದ ಗಮನ ಸೆಳೆಯಬೇಕು, ಕಾಡುಗೊಲ್ಲ ನಿಗಮಕ್ಕೆ ಅನುದಾನ ಒದಗಿಸುವ ಕೆಲಸ ಇಲ್ಲದಿದ್ದರೆ ಕಾಡುಗೊಲ್ಲರು ತಮ್ಮ ಸಾಂವಿಧಾನಿಕ ಹಕ್ಕು ಪಡೆಯಲು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಪತಿಕಾಗೋಷ್ಠಿಯಲ್ಲಿ ಹೆಚ್ ಎಂ ಟಿ ರಮೇಶ್, ಸಂಚಾಲಕ ಶ್ರೀನಿವಾಸ್, ಚಿತ್ತರಾಜು ಜಂಗಮರಳ್ಳಿ ಮತ್ತಿತರು ಉಪಸ್ಥಿತರಿದ್ದರು.