ವಿಕಲ ಚೇತನ ಫಲಾನುಭವಿಗಳಿಗೆ ಕೇಂದ್ರ ಸಚಿವರಿಂದ ಸಲಕರಣೆ ವಿತರಣೆ

ತುಮಕೂರು : ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರು ಶುಕ್ರವಾರ ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಸಲಕರಣೆಗಳನ್ನು ವಿತರಿಸಿದರು.

ಸಚಿವರು ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಕಸಬಾ, ಚೇಳೂರು ಮತ್ತು ಹಾಗಲವಾಡಿ ಹೋಬಳಿಗಳ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಕಸಬಾ ಹೋಬಳಿ ವ್ಯಾಪ್ತಿಯ 6 ಪಂಚಾಯಿತಿ, ಚೇಳೂರು ಮತ್ತು ಹಾಗಲವಾಡಿ ಹೋಬಳಿ ವ್ಯಾಪ್ತಿಯ 9 ಪಂಚಾಯಿತಿಯ ಫಲಾನುಭವಿಗಳಿಗೆ ಭಾರತ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯADIP ಯೋಜನೆಯಡಿ ಸಲಕರಣೆಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕರ ಆಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಇಲಾಖಾ ಅಧಿಕಾರಿಗಳಿಗೆ ಪರಿಹಾರ ಕ್ರಮಕೈಗೊಳ್ಳಲು ಆದೇಶಿಸಿದರು. ಕಸಬಾ ಪಂಚಾಯಿತಿ ಆವರಣದಲ್ಲಿ ಆಗಮಿಸಿದ ನೂರಾರು ಸಾರ್ವಜನಿಕರ ಆಹವಾಲುಗಳನ್ನು ಇಲಾಖೆ ಅಧಿಕಾರಿಗಳೊಂದಿಗೆ ಸ್ವೀಕರಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕ್ರಮ ಜರುಗಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

Leave a Reply

Your email address will not be published. Required fields are marked *