ಹೇಮಾವತಿ ನಾಲಾ ವಲಯಕ್ಕೆ ಉಸ್ತುವಾರಿ ಸಚಿವರಾದ ಜಿ.ಪರಮೇಶ್ವರ್ ಭೇಟಿ

ತುಮಕೂರು : ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮರ್ಪಕ ನಿರ್ವಹಣೆಗಾಗಿ ಗುಬ್ಬಿ ತಾಲ್ಲೂಕಿನ ಹೇಮಾವತಿ ನಾಲಾ ಹಾಗೂ ತುಮಕೂರು ತಾಲ್ಲೂಕಿನ ಬುಗುಡನಹಳ್ಳಿ ಕೆರೆ ಶುದ್ದೀಕರಣ ವ್ಯವಸ್ಥೆಯನ್ನು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಜಿ. ಪರಮೇಶ್ವರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅವರು ಇಂದು ಗುಬ್ಬಿ ತಾಲೂಕಿನ ಈಡಕನಹಳ್ಳಿ ಗ್ರಾಮದ ಬಳಿಯ ಹೇಮಾವತಿ ನಾಲೆಯ ಕಾಮಗಾರಿಯನ್ನು ವೀಕ್ಷಿಸಿ ಪರಿಶೀಲನೆ ನಡೆಸಿದರು. ಹೇಮಾವತಿ ಕಾರ್ಯನಿರ್ವಾಹಕ ಅಭಿಯಂತರಾದ ವರದಯ್ಯಗೆ ಕುಡಿಯುವ ನೀರು ಸರಬರಾಜು ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದರು.

ಹೇಮಾವತಿ ಅಣೆಕಟ್ಟಿನಿಂದ ಜಿಲ್ಲೆಯ ಶಾಖಾ ಕಾಲುವೆ ಮುಖಾಂತರ ಬುಗುಡನಹಳ್ಳಿ ಕೆರೆಯಿಂದ ತುಮಕೂರು ನಗರಕ್ಕೆ 1.135 ಟಿಎಂಸಿ ಕುಡಿಯುವ ನೀರು ಹಂಚಿಕೆಯಾಗಿದ್ದು, ತುಮಕೂರು ಶಾಖಾ ನಾಲೆಯ ಸರಪಳಿ 123.475 ಕಿ.ಮೀ.ನಲ್ಲಿರುವ ಎಸ್ಕೇಪ್ ಹಳ್ಳದ ಮುಖಾಂತರ ತುಮಕೂರು ತಾಲ್ಲೂಕಿನ ಬುಗುಡನಹಳ್ಳಿ ಕೆರೆಗೆ ನೀರನ್ನು ಹರಿಸಲಾಗುತ್ತದೆ. ಬುಗುಡನಹಳ್ಳಿ ಕೆರೆಯ ಪೂರ್ಣ ನೀರಿನ ಸಾಮಥ್ರ್ಯ 363.00 ಎಂಸಿಎಫ್‍ಟಿ ಹಾಗೂ ಗರಿಷ್ಟ ನೀರಿನ ಮಟ್ಟ 793.60 ಮೀ.ಗಳಾಗಿದ್ದು, ಜನವರಿ 2023ರಲ್ಲಿ ತುಂಬಿಸಲಾಗಿದೆ.

ನಂತರ ಸಚಿವರು ತುಮಕೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಬುಗುಡನಹಳ್ಳಿ ಕೆರೆ ಹಾಗೂ ಕುಡಿಯುವ ನೀರು ಶುದ್ಧಿಕರಣ ವ್ಯವಸ್ಥೆ ವೀಕ್ಷಿಸಿದರು. ಈ ಸಂದರ್ಭದಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸಚಿವರಿಗೆ ವಿವರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ, ಉಪವಿಭಾಗಾಧಿಕಾರಿ ಶಿವಪ್ಪ, ತಹಶೀಲ್ದಾರ್ ಆರತಿ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಅಂಜಿನಪ್ಪ ಸೇರಿದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು, ಸ್ಥಳೀಯ ಜನ ಪ್ರತಿನಿಧಿಗಳು, ಮುಖಂಡರುಗಳು, ಇನ್ನಿತರರು ಹಾಜರಿದ್ದರು.

Leave a Reply

Your email address will not be published. Required fields are marked *