
ತುಮಕೂರು : ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಜೊತೆಗೆ ಇಂದು 8 ಮಂದಿ ಮಾತ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ತುಮಕೂರು ಜಿಲ್ಲೆಯ ಡಾ.ಜಿ.ಪರಮೇಶ್ವರ್ ಅವರಿಗೆ ಮೊದಲ ಪಟ್ಟಿಯಲ್ಲೇ ಸಚಿವ ಸ್ಥಾನ ದೊರಕಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರುಗಳಾಗಿ ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ ಖರ್ಗೆ, ರಾಮಲಿಂಗರೆಡ್ಡಿ, ಮತ್ತು ಬಿ.ಝಡ್,ಜಮೀರ್ ಅಹ್ಮದ್ ಖಾನ್ ಅವರುಗಳು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
28 ಮಂದಿ ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸುವರು ಎಂದು ಹೇಳಲಾಗಿತ್ತು, ಆದರೆ 8 ಮಂದಿ ಹೆಸರನ್ನು ಮಾತ್ರ ಹೈಕಮಾಂಡ್ ಒಪ್ಪಿಗೆ ಸೂಚಿಸಿದ್ದು, ಮುಂದಿನ ವಾರ ಪೂರ್ಣಪ್ರಮಾಣದ ಸಚಿವ ಸಂಪುಟ ರಚನೆಯಾಗಲಿದೆ ಎನ್ನಲಾಗಿದೆ.
ತುಮಕೂರು ಜಿಲ್ಲೆಯಿಂದ ಡಾ.ಜಿ.ಪರಮೇಶ್ವರ್ ಅವರನ್ನು ಮೊದಲ ಪಟ್ಟಿಯಲ್ಲೇ ಸಚಿವರನ್ನಾಗಿ ಮಾಡಿದ್ದಾರೆ.
ಡಾ.ಜಿ.ಪರಮೇಶ್ವರ್ ಅವರು ಪ್ರಣಾಳಿಕೆ ತಯಾರಿ ಸಮತಿ ಅಧ್ಯಕ್ಷರಾಗಿ ಬಹಳ ಪ್ರಮುಖ ಕಾರ್ಯ ಕೈಗೊಂಡಿದ್ದನ್ನು ಕಾಣಬಹುದು.
ಡಾ.ಜಿ.ಪರಮೇಶ್ವರ್ ಅವರು ಸಚಿವರಾಗುತ್ತಿರುವುದರಿಂದ ಅವರ ಅಭಿಮಾನಿಗಳಿಗೆ ಸಂತಸ ತಂದಿದೆ.