ಸೆ.17ರಂದು ಭಾರತ್ ಜೋಡೋ ಯಾತ್ರೆ ಹಾದು ಹೋಗುವ ಸ್ಥಳಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

ಗುಬ್ಬಿ : ದೇಶದ ಐಕ್ಯತೆಗಾಗಿ ರಾಹುಲ್ ಗಾಂಧಿ ಅವರು ಪ್ರಾರಂಭಿಸಿರುವ ಭಾರತ್ ಜೋಡೋ ಯಾತ್ರೆಯು ತುಮಕೂರು ಜಿಲ್ಲೆಯಲ್ಲಿ ಹಾದು ಹೋಗುವ ಮುಖ್ಯ ಸ್ಥಳಗಳಿಗೆ ಮಾಜಿ ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್ ಅವರು ಭೇಟಿ ನೀಡಿ ಪೂರ್ವ ತಯಾರಿಯನ್ನು ಪರಿಶೀಲಿಸಲಿದ್ದಾರೆ.

ಗುರುವಾರದಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈಗ ಜಿಲ್ಲೆಯ ಕಾಂಗ್ರೆಸ್ ನಾಯಕರಾಗಿರುವ ಡಾ.ಜಿ.ಪರಮೇಶ್ವರ ಅವರು ರಾಹುಲ್ ಗಾಂಧಿಯವರು ಹಾದು ಹೋಗುವ ಆದಿಚುಂಚನಗಿರಿ, ತುರುವೇಕೆರೆ, ಕಲ್ಲೂರು ಕ್ರಾಸ್, ಗುಬ್ಬಿ ತಾಲ್ಲುಕಿನ ನಿಟ್ಟೂರು, ಶಿರಾಗಳಿಗೆ ಭೇಟಿ ನೀಡಿ ಭಾರತ್ ಜೋಡೋ ಯಾತ್ರೆಯ ಪೂರ್ವ ತಯಾರಿಗಳನ್ನು ಪರಿಶೀಲಿಸಿ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ.

ಡಾ.ಜಿ.ಪರಮೇಶ್ವರ್ ಅವರ ಜೊತೆಯಲ್ಲಿ ಮಾಜಿ ಶಾಸಕರಾದ ಕೆ.ಷಡಕ್ಷರಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಬೆಮಲ್ ಕಾಂತರಾಜು, ಮುರಳಿಧರ ಹಾಲಪ್ಪ, ಜಿ.ಎಸ್.ಪ್ರಸನ್ನಕುಮಾರ್ ಮುಂತಾದವರು ಇರಲಿದ್ದಾರೆ.

Leave a Reply

Your email address will not be published. Required fields are marked *